ಶುಕ್ರವಾರ, ಸೆಪ್ಟೆಂಬರ್ 25, 2020
22 °C

ರಾಜಕೀಯ ಲಾಭಕ್ಕಾಗಿ ಕೆಜಿ ಹಳ್ಳಿ ಘಟನೆ: ಲಕ್ಷ್ಮಣ ಸವದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ‘ಬೆಂಗಳೂರಿನ ಕೆಜಿ ಹಳ್ಳಿ, ಡಿಜಿ ಹಳ್ಳಿ ಘಟನೆಗಳು ಪೂರ್ವ ನಿಯೋಜಿತವಾಗಿದ್ದು, ರಾಜಕೀಯ ಲಾಭ ಪಡೆಯಲು ನಡೆದಿದೆ ಎಂಬುದು ಗೊತ್ತಾಗಿದೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಪ್ರತಿಕ್ರಿಯೆ ನೀಡಿದರು, ‘ನವೀನ್ ಎನ್ನುವ ಯುವಕ ಕಾಂಗ್ರೆಸ್ ಬೆಂಬಲಿಗ. ಸಾಮಾಜಿಕ ಜಾಲದಲ್ಲಿ ಕಾಂಗ್ರೆಸ್‌ ಮುಖಂಡರ ಪೋಸ್ಟರ್‌ಗಳನ್ನು ಹಾಕಿಕೊಂಡಿರುವುದು ಎಲ್ಲರಿಗೂ ತಿಳಿದಿದೆ. ಈಗ ಕಾಂಗ್ರೆಸ್‌ ಮುಖಂಡರು ಏನೇ ಹೇಳಿದರೂ ನವೀನ್‌ ಹಾಕಿರುವುದೆಲ್ಲ ಜಗಜ್ಜಾಹೀರಾಗಿದೆ. ಬಿಜೆಪಿಗೂ ಆತನಿಗೂ ಸಂಬಂಧವಿಲ್ಲ’ ಎಂದರು.

₹25 ಲಕ್ಷ ದೇಣಿಗೆ: ಸಭೆಯಲ್ಲಿ ಪಾಲ್ಗೊಳ್ಳುವ ಮೊದಲು ಬಿಜೆಪಿ ಜಿಲ್ಲಾ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಪೂಜೆ ನೆರವೇರಿಸಿದರು. ₹1.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕಚೇರಿಗೆ ವೈಯಕ್ತಿಕವಾಗಿ ₹25 ಲಕ್ಷ ದೇಣಿಗೆ ನೀಡುವುದಾಗಿ ಘೋಷಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು