ಸಿರವಾರ: ‘ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣ ಮತ್ತು ಹೆಚ್ಚಿನದನ್ನು ಕಲಿಯಲು ಕಲಿಕಾ ಹಬ್ಬ ನೆರವಾಗಲಿದೆ’ ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರೀಫ್ ಮಿಯಾ ಹೇಳಿದರು.

ತಾಲ್ಲೂಕಿನ ನಾರಬಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ, ಸಾಕ್ಷರತಾ ಶಿಕ್ಷಣ, ಕ್ಷೇತ್ರ ಶಿಕ್ಷಣ ಇಲಾಖೆ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಹರವಿ ಮತ್ತು ಸಿರವಾರ ವತಿಯಿಂದ ಶುಕ್ರವಾರ ನಡೆದ ಎಫ್ಎಲ್ಎನ್ ಕಲಿಕಾ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಾಗಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಮಕ್ಕಳಲ್ಲಿ ಬೌದ್ಧಿಕ ಗುಣಮಟ್ಟ ಹೆಚ್ಚಾಗಲು ಮತ್ತು ಅವರಲ್ಲಿ ಅಡಗಿರುವ ಪ್ರತಿಭೆ ಹೊರ ಹಾಕಲು ಈ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ’ ಎಂದು ಹೇಳಿದರು.

‘ಮುಖ್ಯಶಿಕ್ಷಕ ಮಲ್ಲಪ್ಪ, ಎಸ್ಡಿಎಂಸಿ ಅಧ್ಯಕ್ಷ ಹಾಗೂ ಭೂ ದಾನಿ ಹನುಮಂತ ನಾಯಕ, ಎಸ್ಸಿ–ಎಸ್ಟಿ ನೌಕರರ ಸಂಘದ ತಾಲ್ಲೂಕು ಘಕಟದ ಅಧ್ಯಕ್ಷ ಏಸುಮಿತ್ರ, ಜಾವೀದ್ ಪಾಷ ಕುರ್ಡಿ, ಬಸವರಾಜ ಸಜ್ಜನ, ಸಿಆರ್ಪಿ ದಿವಾಕರ, ಮಹೇಶ, ಪವನ ಕುಮಾರ, ರಾಘವೇಂದ್ರ ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.