ಮಂಗಳವಾರ, ಮೇ 17, 2022
23 °C

ಕಾನೂನು ಅರಿವು– ನೆರವು ಸಮಾರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ‘ಪ್ರತಿಯೊಬ್ಬರು ಶಿಕ್ಷಣ ಪಡೆಯಬೇಕು. ಶಿಕ್ಷಣದಿಂದ ಜ್ಞಾನ ವೃದ್ಧಿಸುತ್ತದೆ‘ ಎಂದು ಪ್ರಧಾನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಭಾನುವಾರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ 25ನೇ ವರ್ಷಾಚರಣೆ ಹಾಗೂ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಅ. 2ರಿಂದ ಆರಂಭಿಸಿ ಕಾನೂನು ಅರಿವು-ನೆರವು ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಯಚೂರು ಜಿಲ್ಲೆಯಾದ್ಯಂತ 341 ಕಾನೂನು ಸಾಕ್ಷರತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 905 ಗ್ರಾಮಗಳ ಪೈಕಿ 790 ಗ್ರಾಮಗಳಲ್ಲಿ ಮನೆಮನೆಗೆ ಹೋಗಿ ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೆಯೋದ್ದೇಶಗಳನ್ನೊಳಗೊಂಡ ಕರಪತ್ರಗಳನ್ನು ಹಂಚಲಾಗಿದೆ. ಗ್ರಾಮೀಣ ಜನರಿಗೆ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಗಿದೆ‘ ಎಂದು ವಿವರಿಸಿದರು.

 ಜಾಥಾಕ್ಕೆ ಚಾಲನೆ: ಇದಕ್ಕೂ ಮೊದಲು ನಗರದ ಟ್ಯಾಗೋರ್ ಕಾಲೇಜಿನ ಆವರಣದಿಂದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಡೆದ ಕಾನೂನು ಅರಿವು-ನೆರವು ಜಾಥಾ ನಡೆಯಿತು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜೆ.ಬಸವರಾಜ, ಒಂದನೇಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಕೂಡುವಕ್ಕಲೀಗೇರ ಮಹಾದೇವಪ್ಪ ಗಂಗಪ್ಪ, ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ  ದೇವಾನಂದ ಪುಟ್ಟಪ್ಪ ನಾಯಕ, ಪ್ರಭಾರ ಪ್ರಧಾನ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಹೇಮಾ ಪಸ್ತಾಪೂರ್, ಜೆ.ಎಂ.ಎಫ್.ಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಮತಾ ಆರ್.ಎ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಜನ್ ಆರ್.ಎ, ತಾಪಂ ಇಒ ರಾಮರೆಡ್ಡಿ ಪಾಟೀಲ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ ಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೀರನಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು