ರಾಯಚೂರು: ‘ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಸ್ವಂತ ಪಕ್ಷ ಕಟ್ಟಿ ಐದು ಸೀಟು ಗೆಲ್ಲಲಿ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ತಾಲ್ಲೂಕಿನ ಮಿಟ್ಟಿಮಲ್ಕಾಪುರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಾಂಗ್ರೆಸ್ ಆರಂಭಿಸಿರುವ ಪ್ರಜಾಧ್ವನಿ ಯಾತ್ರೆಯಲ್ಲಿ ಬರೀ ಕುಮಾರಸ್ವಾಮಿ ಭಜನೆ ನಡೆದಿದೆ. ಜೆಡಿಎಸ್ 25 ಸ್ಥಾನಗಳನ್ನು ಮಾತ್ರ ಗೆಲ್ಲಲಿದೆ ಎಂದು ಸುಳ್ಳಿನರಾಮಯ್ಯ ಹೇಳಿದ್ದಾರೆ. ಆದರೆ, ಚುನಾವಣೆ ಬಳಿಕ ಜೆಡಿಎಸ್ ದೇಶದ ಗಮನ ಸೆಳೆಯಲಿದೆ’ ಎಂದರು.

‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೆಎಲ್‌ಇ ಸೊಸೈಟಿ ಕಾರ್ಯಕ್ರಮಕ್ಕೆ ಬಂದಿದ್ದಾರೆ. ರಾಜ್ಯಕ್ಕೆ ಯಾವುದೇ ಕೊಡುಗೆ ತಂದಿಲ್ಲ. ಮಹದಾಯಿ ಯೋಜನೆ ಟೆಂಡರ್ ಕರೆಯುವುದಾಗಿ ಹೇಳಿದ್ದರು. ಈಗ ಏನಾಗಿದೆ?’ ಎಂದು ಅವರು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.