ಶನಿವಾರ, ಜೂನ್ 19, 2021
26 °C

ರಾಯಚೂರು–ಯಾದಗಿರಿ: ವಿಶೇಷ ಪ್ಯಾಕೇಜ್‌ಗೆ ಸಂಸದ ರಾಜಾ ಅಮರೇಶ್ವರ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂಸದ ರಾಜಾ ಅಮರೇಶ್ವರ ನಾಯಕ

ರಾಯಚೂರು: ಕೋವಿಡ್‌ ಎರಡನೇ ಅಲೆ ನಿಯಂತ್ರಿಸಲು ಮಹತ್ವಾಕಾಂಕ್ಷಿ ಜಿಲ್ಲೆಯಾಗಿರುವ ರಾಯಚೂರು–ಯಾದಗಿರಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಒದಗಿಸುವಂತೆ ಸಂಸದ ರಾಜಾ ಅಮರೇಶ್ವರ ನಾಯಕ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್‌ ಅವರಿಗೆ ಪತ್ರ ಬರೆದಿದ್ದಾರೆ.

ಹಲವಾರು ಕಾರ್ಮಿಕರು ತಮ್ಮ ಕೆಲಸಗಳನ್ನು ಕಳೆದುಕೊಂಡಿದ್ದು ಮಕ್ಕಳು- ಬಂಧುಗಳಿಗೆ ಚಿಕಿತ್ಸೆ ಕೊಡಲು ಪರದಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಬಡ ಜನಾಂಗದವರಿದ್ದು ಹೆಚ್ಚಾಗಿ ನೆಲೆಸಿದ್ದು ಅವರಿಗೆ ಈ ಚಿಕಿತ್ಸೆ  ವೆಚ್ಚ ಭರಿಸಲು ಶಕ್ತವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು  ಯುದ್ಧೋಪಾದಿಯಲ್ಲಿ ಸಾರ್ವಜನಿಕರಿಗೆ ಸೇವೆ ಸಲ್ಲಿಸುತ್ತಿದ್ದರೂ ರೆಮಿಡಿಸಿವರ್, ಆಕ್ಸಿಜನ್, ವ್ಯಾಕ್ಸಿನ್ ಕೊರತೆಯಿಂದಾಗಿ ಕಂಗೆಟ್ಟಿದ್ದಾರೆ. ಇದಲ್ಲದೆ ಕ್ಷೇತ್ರದ ಜಿಲ್ಲಾ ಆರೋಗ್ಯ ಇಲಾಖೆಗೆ ಹೆಚ್ಚಿನ ಸಿಟಿ ಸ್ಕ್ಯಾ ನ್, ಆ್ಯಂಬುಲೆನ್ಸ್ ಹಾಗೂ  ಆಕ್ಸಿಜನ್  ಬಾಟ್ಲಿಂಗ್ ಪ್ಲಾಂಟ್‌ಗಳ ಅವಶ್ಯಕತೆಯಿದೆ ಎಂದು ಕೋರಿದ್ದಾರೆ.

ಕೇಂದ್ರ ಸರ್ಕಾರದಿಂದ ಮಹತ್ವಾಕಾಂಕ್ಷಿ ಜಿಲ್ಲೆಗಳೆಂದು ಘೋಷಿಸಿರುವ ಹಾಗೂ ಕಲ್ಯಾಣ ಕರ್ನಾಟಕದಲ್ಲಿಯೇ ಅತಿ ಹಿಂದುಳಿದ ಈ ಜಿಲ್ಲೆಗಳಿಗೆ ಕೋವಿಡ್-19 ವಿಶೇಷ ಪ್ಯಾಕೇಜನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಎಂದು ಅರಿಕೆ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು