ಅಕ್ರಮ ಮದ್ಯ ಮಾರಾಟ: ಮಹಿಳೆಯರಿಂದ ಪತ್ರ ಚಳವಳಿ

ರಾಯಚೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಹೈಕೋರ್ಟ್ ಆದೇಶ ಅನುಷ್ಠಾನ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಮಹಿಳೆಯರು ನಡೆಸುತ್ತಿರುವ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ಪತ್ರ ಚಳವಳಿ ಮಾಡಿದರು.
ಜಿಲ್ಲಾ ಕ್ರೀಡಾಂಗಣದಲ್ಲಿರುವ ಮಹಾತ್ಮಗಾಂಧಿ ಪುತ್ಥಳಿ ಎದುರು ಧರಣಿ ನಡೆಯುತ್ತಿದೆ.
ಆದೇಶ ಅನುಷ್ಠಾನದ ಬಗ್ಗೆ ಚರ್ಚಿಸುವುದಕ್ಕೆ ಮಹಿಳಾ ನಿಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಯಾವಕಾಶ ನೀಡಬೇಕು. ಅಕ್ರಮ ಮದ್ಯ ಮಾರಾಟ ತಕ್ಷಣವೇ ತಡೆಗಟ್ಟಬೇಕು ಎನ್ನುವುದು ಮಹಿಳೆಯರ ಬೇಡಿಕೆಗಳು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.