ಲಿಂಗಸುಗೂರು : ನಿತ್ಯ ಮದ್ಯ ಸೇವಿಸಿ ತಾಯಿಯೊಂದಿಗೆ ಜಗಳವಾಡುತ್ತಿದ್ದ ಅಣ್ಣನ ವರ್ತನೆಯಿಂದ ಬೇಸತ್ತ ತಮ್ಮ, ಆತನನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ಪಟ್ಟಣದ ಬಸವಸಾಗರ ವೃತ್ತದ ಬಳಿ ಶನಿವಾರ ರಾತ್ರಿ ನಡೆದಿದೆ.

ಪಟ್ಟಣದ ಬಸವಸಾಗರ ವೃತ್ತದ ಹತ್ತಿರದ ನಿವಾಸಿ ಬಸವರಾಜ ವಾಸುದೇವ ಸೀರಿಗುಪ್ಪಿ (32) ಕೊಲೆಯಾದ ವ್ಯಕ್ತಿ. ಆರೋಪಿ ಶ್ರೀಧರನನ್ನು (27) ಪಟ್ಟಣದ ಪೊಲೀಸರು ಬಂಧಿಸಿದ್ದಾರೆ. ಕುಡಿದು ಬಂದು ತಾಯಿ ಜತೆ ಬಸವರಾಜ ದಿನ ಜಗಳವಾಡುತ್ತಿದ್ದ. ಅಣ್ಣನ ವರ್ತನೆಗೆ ತಮ್ಮ ಶ್ರೀಧರ್ ಬೇಸತ್ತು ಹೋಗಿದ್ದ. ಶನಿವಾರವೂ ಅಣ್ಣ ಮನೆಯಲ್ಲಿ ಗಲಾಟೆ ಮಾಡಿದ್ದ. ಇದರಿಂದ ಬೇಸತ್ತ ತಮ್ಮ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಆದರೆ ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಫ್ಯಾನ್ಗೆ ನೇಣು ಹಾಕಿಕೊಂಡಿದ್ದಾನೆ ಎಂದು ಮನೆಯವರಿಗೆ ನಂಬಿಸಲು ಯತ್ನಿಸಿದ್ದ ಎಂದು ಪೊಲೀಸರ ವಿಚಾರಣೆ ವೇಳೆ ಶ್ರೀಧರ ತಪ್ಪೊಪ್ಪಿಕೊಂಡಿದ್ದಾನೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-32-2044900253

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.