ಲಿಂಗಸುಗೂರು: ಮಕ್ಕಳಲ್ಲಿ ಉದ್ಯಮಶೀಲತೆ, ಆತ್ಮವಿಶ್ವಾಸ ಹಾಗೂ ಜೀವನ ಕೌಶಲಗಳನ್ನು ಬೆಳೆಸುವ ಉದ್ದೇಶದಿಂದ ಪಟ್ಟಣದ ಅಮರೇಶ್ವರ ಪ್ರೌಢಶಾಲೆಯಲ್ಲಿ ಭಾನುವಾರ ಆಟ ಕೂಟ ಮಕ್ಕಳ ರಂಗ ಶಿಬಿರ ಮಕ್ಕಳಿಗೆ ಆಯೋಜಿಸಿದ್ದ ಮಕ್ಕಳ ಸಂತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಮಕ್ಕಳ ಸಂತೆಯಲ್ಲಿ ಭಾಗವಹಿಸಿದ ರಂಗ ಶಿಬಿರದ ಮಕ್ಕಳು ತಾವೇ ವ್ಯಾಪಾರಿಗಳಾಗಿ ತಿಂಡಿ-ತಿನಿಸು, ಜ್ಯೂಸ್, ನೀರು, ಬಾಳೆ ಹಣ್ಣು ಸೇರಿ ಮುಂತಾದ ವಸ್ತುಗಳನ್ನು ಮಾರಾಟ ಮಾಡುವ ಮೂಲಕ ಖರೀದಿ ಮಾಡುವುದು ಹಾಗೂ ಮಾರಾಟ ಮಾಡುವುದರ ಬಗ್ಗೆ ಪ್ರಾಯೋಗಿಕ ಅನುಭವ ಪಡೆದುಕೊಂಡರು. ಸಂತೆಯಿಂದ ಸಂತಸದ ಅನುಭವ ಪಡೆದುಕೊಂಡರು.

ಮಕ್ಕಳ ಸಂತೆಯನ್ನು ವಿವಿ ಸಂಘದ ಆಡಳಿತಾಧಿಕಾರಿ ಬಸವಂತರಾಯ ಕುರಿ ಉದ್ಘಾಟಿಸಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ, ಎಪಿಎಂಸಿ ಅಧ್ಯಕ್ಷ ಅಮರೇಶ ಹೆಸರೂರು, ಮಹ್ಮದ್ ರಫಿ, ನರೇಶರೆಡ್ಡಿ, ನಿರ್ದೇಶಕ ಶಂಕ್ರಯ್ಯ ಘಂಟಿ, ಪ್ರಭುರಾಜ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-32-1629104099

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.