ಲಿಂಗಸುಗೂರು: ‘ಕಾಂಗ್ರೆಸ್ ಹೈಕಮಾಂಡ್ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುವೆ’ ಎಂದು ಮಾಜಿ ಶಾಸಕ ಡಿ.ಎಸ್.ಹೂಲಗೇರಿ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಯಾರಿಗೆ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆಯೋ ಅಂತಹವರಿಗೆ ನಿಗಮ ಮಂಡಳಿ ಸ್ಥಾನಮಾನ ನೀಡಲು ಆಗುವುದಿಲ್ಲ. ಮೂರು ವರ್ಷಗಳ ನಂತರ ಅವಕಾಶ ನೀಡಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದರು. ಅದರಂತೆ ಈಗ ಮೂರು ವರ್ಷ ಕಳೆಯುತ್ತಿದೆ. ನಿಗಮ ಮಂಡಳಿ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುವೆ’ ಎಂದರು.

‘ಯಾವುದೇ ಸ್ಥಾನಮಾನ ನೀಡಿದರೂ ಪರವಾಗಿಲ್ಲ. ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವೆ’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ, ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ ಸೊಪ್ಪಿಮಠ, ದಾವೂದ್ ಮುದಗಲ್, ಎಸ್.ಆರ್.ರಸೂಲ್, ಮಹ್ಮದ್ ರಫಿ, ಉಮೇಶ ಹುನುಕುಂಟಿ, ಸಂಜೀವಪ್ಪ ಹುನಕುಂಟಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-32-92817411

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.