ಲಿಂಗಸುಗೂರು: ‘ತಾಲ್ಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವುದೇ ನನ್ನ ಗುರಿ’ ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.

ಪಟ್ಟಣದಲ್ಲಿ ₹25 ಲಕ್ಷ ಅನುದಾನದಲ್ಲಿ ಕನಕ ಭವನ ನಿರ್ಮಾಣಕ್ಕೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ತಾಲ್ಲೂಕು ಬ್ರಿಟಿಷರ ಆಡಳಿತದಲ್ಲಿ ಜಿಲ್ಲಾ ಕೇಂದ್ರವಾಗಿತ್ತು. ಮತ್ತೆ ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಸರ್ಕಾರದ ಮಟ್ಟದಲ್ಲಿ ಹೋರಾಟ ನಡೆಸಿದ್ದೇನೆ. ಅತಿ ವೇಗವಾಗಿ ಬೆಳೆಯುತ್ತಿರುವ ತಾಲ್ಲೂಕನ್ನು ಜನಸಂಖ್ಯೆಯ ಆಧಾರದ ಮೇಲೆ ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಸರ್ಕಾರ ಮುಂದಾಗಬೇಕಾಗಿದೆ. ಇದಕ್ಕೆ ಕ್ಷೇತ್ರದ ಜನತೆ ಸಹಕಾರ ನೀಡಬೇಕು’ ಎಂದರು.

‘ಲಿಂಗಸುಗೂರು ಪಟ್ಟಣದಲ್ಲಿ ₹18 ಕೋಟಿ ವೆಚ್ಚದಲ್ಲಿ ಹಲವು ಪ್ರಮುಖ ರಸ್ತೆಗಳನ್ನು ಸಿಸಿ ರಸ್ತೆಗಳನ್ನಾಗಿ ಅಭಿವೃದ್ಧಿ ಪಡಿಸಲಾಗಿದೆ. ನಾನು ಮೂರು ಬಾರಿ ಶಾಸಕನಾಗಲು ಹಾಲುಮತ ಸಮುದಾಯದ ಆಶೀರ್ವಾದವೂ ಇದೆ. ಆದ್ದರಿಂದ ಎರಡನೇ ಬಾರಿ ಶಾಸಕನಾಗಿದ್ದಾಗ ಕನಕ ಭವನಕ್ಕೆ ₹5 ಲಕ್ಷ ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷನಾಗಿದ್ದಾಗ ₹10 ಲಕ್ಷ ನೀಡಿದ್ದೇನೆ. ಈಗ ₹25 ಲಕ್ಷ ಅನುದಾನ ನೀಡಿದ್ದೇನೆ. ಅದರಂತೆ ಸಂತ ಸೇವಾಲಾಲ್ ಭವನಕ್ಕೆ ₹50 ಲಕ್ಷ, ವಾಲ್ಮೀಕಿ ಭವನಕ್ಕಾಗಿ ₹25 ಲಕ್ಷ, ಹೂಗಾರ ಸೇರಿ ಇತರೆ ಸಮುದಾಯ ಭವನಗಳಿಗೆ ಅನುದಾನ ಒದಗಿಸಿದ್ದೇನೆ’ ಎಂದು ಹೇಳಿದರು.

ಸಿಂಧನೂರು ಬಿಜೆಪಿ ಮುಖಂಡ ಕೆ.ಕರಿಯಪ್ಪ, ಹಾಲುಮತ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಕುಪ್ಪಣ್ಣ ಕೊಡ್ಲಿ, ಬಿಜೆಪಿ ಮಂಡಲ ಅಧ್ಯಕ್ಷ ಕೆ.ನಾಗಭೂಷಣ, ಮುದಗಲ್ ಮಂಡಲ ಅಧ್ಯಕ್ಷ ಹುಲ್ಲೇಶ ಸಾಹುಕಾರ, ಹನುಮಂತ ಕಂದಗಲ್, ಸಣ್ಣ ಸಿದ್ದಯ್ಯ, ಬೀರಪ್ಪ ಪೂಜಾರಿ, ಬಾಲನಗೌಡ ಯಲಗಲದಿನ್ನಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-32-1768162725

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.