ಲಿಂಗಸುಗೂರ: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಕಾರ್ಯಕರ್ತರು ಉಪವಿಭಾಗಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದರು.

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯಗೊಳಿಸಿದ್ದರಿಂದ ರೈತರಿಗೆ ತೊಂದರೆಯಾಗಿದೆ. ಕೂಡಲೇ ಇದನ್ನು ಕೈಬಿಡಬೇಕು. ತಾಲ್ಲೂಕಿನಲ್ಲಿ ರಸಗೊಬ್ಬರ ದಾಸ್ತಾನು ಮಾಡಬೇಕು. ಮುಂಗಾರು ಹಂಗಾಮಿಗೆ ರಸಗೊಬ್ಬರ ಅಭಾವವಾಗದಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ನಾರಾಯಣಪುರ ಬಲದಂಡೆ ನಾಲೆಯ ಸ್ಕಾಡಾ ಗೇಟ್, ವಿತರಣಾ, ಔಟ್ಲೆಟ್ಗಳ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಇದರಿಂದಾಗಿ ಗೇಟ್ಗಳು ಕೊಚ್ಚಿಕೊಂಡು ಹೋದಾಗ ರೈತರು ನಷ್ಟ ಅನುಭವಿಸುವಂತಾಗಿದೆ. ಈ ಬಗ್ಗೆ ಪರಿಶೀಲಿಸಿ, ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತರಕಾರಿ ಮಾರಾಟ ಮಾಡುವ ರೈತರಿಂದ ಕರ ವಸೂಲಿ ಮಾಡಬಾರದು. ತಾಲ್ಲೂಕಿನಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಕೂಡಲೇ ನಿಲ್ಲಿಸಬೇಕು ಹಾಗೂ ಎಲ್ಲಾ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು. ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಪುತ್ರಗೌಡ ನಂದಿಹಾಳ, ತಾಲ್ಲೂಕು ಅಧ್ಯಕ್ಷ ದುರ್ಗಾಪ್ರಸಾದ, ಬಸಣ್ಣ ಕೋಠಾ, ನಾಗಪ್ಪ ಪುಣೇದ, ದುರಗಪ್ಪ ಗೌಡೂರು, ಸಿದ್ದು ಗೌಡೂರು, ರಮೇಶ ಗೌಡೂರು, ರಾಮನಗೌಡ ಕೋಠಾ, ಹನುಮಗೌಡ ಭೂಪುರ, ಖಾದರಸಾಬ್, ಭೀಮಪ್ಪ, ಆದಪ್ಪ, ಕಿರಣಕುಮಾರ, ಶ್ರೀನಿವಾಸ, ಮಲ್ಲು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-32-752928856

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.