ಲಿಂಗಸುಗೂರು: ‘ಉತ್ತಮ ಇಳುವರಿಗಾಗಿ ರೈತರು ತಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡಿಸುವತ್ತ ಆಸಕ್ತಿ ವಹಿಸಬೇಕು’ ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥೆ ವಾಣಿಶ್ರೀ ಎಸ್. ಹೇಳಿದರು.

ಪಟ್ಟಣದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮುಂಗಾರು ಹಂಗಾಮು ಬೆಳೆಗಳ ಕುರಿತು ತಾಂತ್ರಿಕ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಮುಂಗಾರು ಬಿತ್ತನೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇದೆ. ಮುಂಗಾರು ಹಂಗಾಮಿನಲ್ಲಿ ಈ ಭಾಗದಲ್ಲಿ ಭತ್ತ, ಹತ್ತಿ, ಮೆಕ್ಕೆಜೋಳ, ಸಜ್ಜೆ, ಶೇಂಗಾ, ತೊಗರಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ’ ಎಂದರು. ಕೇಂದ್ರದ ವಿಷಯ ತಜ್ಞೆ ರೇಣುಕಾ ಬಿರಾದಾರ ಮಾತನಾಡಿ,‘ರೈತರು ಮಣ್ಣಿನ ಫಲವತ್ತತೆ ಹಿತದೃಷ್ಟಿಯಿಂದ ರಸಗೊಬ್ಬರ ಮತ್ತು ಕೀಟನಾಶಕಗಳ ಬಳಕೆ ಕಡಿಮೆ ಮಾಡಬೇಕು. ಪ್ರತಿ 3 ವರ್ಷಕ್ಕೊಮ್ಮೆ ಮಣ್ಣು ಪರೀಕ್ಷೆ ಮಾಡಿಸಿ, ಅದರಲ್ಲಿರುವ ಪೋಷಕಾಂಶಗಳ ಕೊರತೆಗೆ ಅನುಗುಣವಾಗಿ ಮಿತವಾಗಿ ರಾಸಾಯನಿಕ ಗೊಬ್ಬರ ಬಳಸಬೇಕು’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-32-798253436

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.