ಲಿಂಗಸುಗೂರು: ತಾಲ್ಲೂಕಿನ ಸರ್ಜಾಪುರ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ, ಪಿಡಿಒ ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಉಪ ವಿಭಾಗಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು.

‘ಏ.3ರಂದು ಸರ್ಜಾಪುರ ಗ್ರಾಮದ ಸುಮಾರು 70 ರಿಂದ 80 ಜನ ಯಾವುದೇ ಮಾಹಿತಿ ನೀಡದೇ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿದ್ದಾರೆ. ಮರುದಿನ ಏ.4ರಂದು ಬೆಳಿಗ್ಗೆ ಗ್ರಾಮ ಪಂಚಾಯಿತಿಗೆ ಹಾಕಿದ ಬೀಗ ಮುರಿದು ಎಂದಿನಂತೆ ಕರ್ತವ್ಯಕ್ಕೆ ಹಾಜರಾದ ಪಿಡಿಒ ಶೋಭಾರಾಣಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಕಚೇರಿ ಸಿಬ್ಬಂದಿಯನ್ನು ಹೊರ ಹಾಕಿದ್ದಾರೆ. ಈ ಬಗ್ಗೆ ಏ.6ರಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ’ ಎಂದು ಹೇಳಿದರು.

ಇಂಥ ಘಟನೆಗಳಿಂದಾಗಿ ನೌಕರರು ಕರ್ತವ್ಯ ನಿರ್ವಹಿಸಲು ಭಯಭೀತರಾಗಿದ್ದಾರೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

‘ಕೆಲ ಸಂಘಟನೆಗಳ ಮುಖಂಡರು ಸರ್ಕಾರಿ ಕಚೇರಿಗಳಿಗೆ ತೆರಳಿ ವೀಡಿಯೊ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದು, ಇದರಿಂದ ನೌಕರರ ತೇಜೊವಧೆಯಾಗುತ್ತಿದ್ದು, ನೌಕರರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸಾಧ್ಯ ವಾಗುತ್ತಿಲ್ಲ. ಆದ ಕಾರಣ ಇಂಥ ಘಟನೆಗಳನ್ನು ತಡೆಯಲು ಕ್ರಮವಹಿಸಬೇಕು’ ಎಂದು ಒತ್ತಾಯಿಸಿದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹಾಜಿಬಾಬು ಕಲ್ಯಾಣಿ, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಮರೇಶಪ್ಪ ಹೂನೂರು, ರುದ್ರಗೌಡ ಪಾಟೀಲ, ಗಂಗಾಧರ ನಾಯಕ, ಶೆಟೆಪ್ಪ ನಾಯ್ಕ, ಅರ್ಜುನ, ರಂಗಣ್ಣ ದೊಡ್ಮನಿ, ಪ್ರಭುಲಿಂಗ ಗದ್ದಿ, ಮಹ್ಮದ್ ಸಬಿಲ್, ಬಸವರಾಜ, ಶೋಭಾರಾಣಿ, ಜಮದಗ್ನಿ, ಮಾನಪ್ಪ, ಚಿದಾನಂದ, ಅಬ್ದುಲ್ ರೌಫ್, ಮಾನಪ್ಪ ಬಡಿಗೇರ, ವಿರೇಶ ತೇರದಾಳ ಹಾಗೂ ಹನುಮೇಶ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-32-1420530180

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.