ಲಿಂಗಸುಗೂರು: ತಾಲ್ಲೂಕಿನ ಗುಡದನಾಳ ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಕಚೇರಿ ಸಿಬ್ಬಂದಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಗುಡದನಾಳ ಗ್ರಾಮದಲ್ಲಿ ಹಲವು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದೆ. ಗ್ರಾಮಸ್ಥರು ಪರದಾಡುವಂತಾಗಿದೆ. ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಸಮಸ್ಯೆ ಬಗೆಹರಿಸಿಲ್ಲ. ನೀರಿಗಾಗಿ ಹೊಲ, ಕೆರೆಗಳಿಗೆ ಅಲೆದಾಡುವಂತಾಗಿದೆ. ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ, ನೀರಿನ ಸಮಸ್ಯೆ ಬಗ್ಗೆ ಖುದ್ಧು ಪರಿಶೀಲಿಸಿ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು. ಗುಂಡಪ್ಪ ದ್ಯಾಪೂರು, ದೇವಪ್ಪ ಮಜ್ಜಗಿ, ಅಮರಯ್ಯ, ಅಮರೇಶ, ಸಿದ್ದಯ್ಯ, ಮಹಾಂತೇಶ, ಪ್ರದೀಪ, ಶರಣಬಸವ, ರಮೇಶ ಹಾಗೂ ವೆಂಕೋಬ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-32-407254026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.