ಲಿಂಗಸುಗೂರು: ತಾಲ್ಲೂಕಿನಲ್ಲಿ ಹೋಬಳಿ ಕೇಂದ್ರಗಳನ್ನು ಹೆಚ್ಚಿಸುವಂತೆ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ಅವರು ಕಂದಾಯ ಸಚಿವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ತಾಲ್ಲೂಕಿನಲ್ಲಿ ಮೂರು ಹೋಬಳಿ ಕೇಂದ್ರಗಳು ಇರುವುದರಿಂದ ಮೂರು ಹೋಬಳಿ ಕೇಂದ್ರಗಳಿಗೆ ಹೆಚ್ಚಿನ ಒತ್ತಡ ಹಾಗೂ ಸಾರ್ವಜನಿಕರಿಗೂ ತೊಂದರೆಯಾಗುತ್ತಿದ್ದು, ಒತ್ತಡ ತಪ್ಪಿಸುವ ಉದ್ದೇಶದಿಂದ ತಾಲ್ಲೂಕಿನ ಹಟ್ಟಿ, ನಾಗರಾಳ, ಮಾವಿನಭಾವಿ, ಆನಾಹೊಸೂರು ಗ್ರಾಮಗಳನ್ನು ಹೊಸದಾಗಿ ಹೋಬಳಿ ಕೇಂದ್ರಗಳನ್ನಾಗಿ ಮಾಡಬೇಕು ಎಂದು ಪತ್ರ ಬರೆದಿದ್ದಾರೆ.

ಹಟ್ಟಿ ಪಟ್ಟಣದಲ್ಲಿ 40 ಸಾವಿರ ಜನಸಂಖ್ಯೆ ಇದೆ. ಪಟ್ಟಣದಲ್ಲಿ ಪಶು ಆಸ್ಪತ್ರೆ ಇಲ್ಲದಾಗಿದೆ. ಹಟ್ಟಿ ಹಾಗೂ ಸುತ್ತಮುತ್ತಲಿನ 8-10 ಹಳ್ಳಿಗಳಲ್ಲಿನ ರೈತರು ತಮ್ಮ ಜಾನುವಾರು ಗಳನ್ನು ದೂರದ ಗೆಜ್ಜಲಗಟ್ಟಾ ಗ್ರಾಮಕ್ಕೆ ತೆಗೆದುಕೊಂಡ ಹೋಗಿ ಬರಬೇಕಾಗಿದೆ. ಹೀಗಾಗಿ ಹಟ್ಟಿಯಲ್ಲಿ ಪಶು ಚಿಕಿತ್ಸಾ ಕೇಂದ್ರ ಸ್ಥಾಪನೆ ಮಾಡುವಂತೆ ಪಶು ಸಂಗೋಪನಾ ಇಲಾಖೆ ಸಚಿವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-32-686786232

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.