ಲಿಂಗಸುಗೂರು: ಪಿಂಚಣಿಪುರದಲ್ಲಿ ಪರಿಶಿಷ್ಟರು, ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಿಗೆ ಸೌಕರ್ಯ ಒದಗಿಸಲು ವಿಫಲರಾದ ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜನ ಜಾಗೃತಿ ಸಮಿತಿ ಪದಾಧಿಕಾರಿಗಳು ಉಪವಿಭಾಗಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು.

‘ಈ ಪ್ರದೇಶದಲ್ಲಿ ಸಿಸಿ ರಸ್ತೆಗಳಿಲ್ಲದೆ ಸಂಚಾರ ದುಸ್ತರವಾಗಿದೆ. ಚರಂಡಿ ವ್ಯವಸ್ಥೆ ಹದಗೆಟ್ಟಿದೆ. ಹಾವು-ಚೇಳುಗಳಂತಹ ವಿಷಜಂತುಗಳ ಹಾವಳಿ ಹೆಚ್ಚಾಗಿದೆ. ಮಳೆಗಾಲದಲ್ಲಿ ರಾಜಕಾಲುವೆ ನೀರು ಮನೆಗಳಿಗೆ ನುಗ್ಗುತ್ತದೆ’ ಎಂದು ತಿಳಿಸಿದರು.

‘ಹಳೆ ವಿದ್ಯುತ್ ಕಂಬಗಳು ತುಕ್ಕು ಹಿಡಿದಿವೆ. ತಂತಿಗಳು ಪರಸ್ಪರ ತಾಗಿ ಅಪಾಯಕಾರಿ ಸ್ಥಿತಿಯಲ್ಲಿವೆ. ಕಂಬಗಳನ್ನು ಬದಲಾಯಿಸುವುದು ಸೇರಿದಂತೆ ಇತರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಎರಡು ತಿಂಗಳುಗಳ ಹಿಂದೆ ನಾಲ್ಕು ದಿನ ಧರಣಿ ನಡೆಸಲಾಗಿತ್ತು’ ಎಂದರು.

‘ಪುರಸಭೆ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮೂಲಸೌಕರ್ಯ ಒದಗಿಸುವುದಾಗಿ ಭರವಸೆ ನೀಡಿದ್ದರು. ಅದಾಗಿ ಎರಡು ತಿಂಗಳು ಕಳೆಯುತ್ತಾ ಬಂದರೂ ಯಾವುದೇ ಸಮಸ್ಯೆ ಪರಿಹರಿಸಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ವಿನಾಃಕಾರಣ ಕಾಲಹರಣ ಮಾಡುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ಮಾಡುವ ಪುರಸಭೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಕಿರಣಕುಮಾರ ಚಿಕ್ಕಹೆಸರೂರು, ಪ್ರದೀಪ, ಚಿನ್ನಪ್ಪ ರಾರಾವಿ, ಮೌನೇಶ, ಪ್ರವೀಣ, ಹುಲಿಗಪ್ಪ ಕೆಸರಟ್ಟಿ, ಚಿದಾನಂದ ಹಾಗೂ ರಾಜು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-32-1748638281

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.