ಲಿಂಗಸುಗೂರು: ‘ವ್ಯಕ್ತಿಗೆ ಅಧಿಕಾರ ಶಾಶ್ವತವಲ್ಲ, ಅಧಿಕಾರವಧಿಯಲ್ಲಿ ಅವರು ಮಾಡಿದ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ, ಇದಕ್ಕೆ ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ ಆನ್ವರಿ ಅವರೇ ನಿರ್ದಶನ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.

ಪಟ್ಟಣದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ ಆನ್ವರಿಯವರ 84ನೇ ಜನ್ಮದಿನದ ಸಹಸ್ರ ಚಂದ್ರ ದರ್ಶನ, ಅಸೀಮ ನಾಯಕನ ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾ.ಪಂಯಿಂದ ಕೇಂದ್ರ ಸಚಿವರಾಗುವ ಮೂಲಕ ಬಸವರಾಜ ಪಾಟೀಲ ಆನ್ವರಿ ಅವರು ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಶ್ರಮಿಸುವ ಜತೆ ಈ ಭಾಗದ ಜನರ ಮನಸ್ಸನ್ನು ಗೆದ್ದಿದ್ದಾರೆ. ಕೇಂದ್ರ ಮಂತ್ರಿಯಾಗಿದ್ದ ವೇಳೆ ಜಿಂದಾಲ್ ಕಂಪನಿ ತರುವ ಮೂಲಕ ಈ ಭಾಗದ ಸಾವಿರಾರು ಯುವಕರಿಗೆ ಉದ್ಯೋಗ ಕಲ್ಪಿಸಿಕೊಟ್ಟಿದ್ದಾರೆ. ಆನ್ವರಿ ಅವರು ತಮ್ಮ ರಾಜಕೀಯ ಇತಿಹಾಸದಲ್ಲಿ ಸಮಾಜಮುಖಿ ಕೆಲಸ ಮಾಡುವ ಜೊತೆಗೆ ಎಲ್ಲರ ವಿಶ್ವಾಸ ಗಳಿಸಿದ ಅಪರೂಪದ ವ್ಯಕ್ತಿಯಾಗಿದ್ದಾರೆ. ಇಂದಿನ ಸಮಾಜದ ವ್ಯವಸ್ಥೆ, ರಾಜಕೀಯ ಭವಿಷ್ಯ ಮತ್ತು ಈ ಭಾಗದ ಅಭಿವೃದ್ಧಿಯ ಕುರಿತು ಪ್ರತಿ ಹಂತದಲ್ಲಿ ಯುವ ರಾಜಕಾರಣಿಗಳಿಗೆ ಮಾರ್ಗದರ್ಶನ ನೀಡಬೇಕು’ ಎಂದರು.

ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ.ಪಾಟೀಲ್ ಅಭಿನಂದನಾ ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿ, ‘ಬಸವರಾಜ ಪಾಟೀಲ ಆನ್ವರಿ ಅವರು ಉತ್ತರ ಕರ್ನಾಟಕ ಭಾಗದಲ್ಲಿ ಯಾವುದೇ ಹೋರಾಟಗಳಿಗೆ ಧ್ವನಿಯಾಗಿ ನಿಂತವರಾಗಿದ್ದಾರೆ. ಆನ್ವರಿ ಎಂಬ ಕುಗ್ರಾಮದಿಂದ ದೆಹಲಿಯ ಗದ್ದುಗೆ ಹಿಡಿದ ಅಪರೂಪದ ರಾಜಕಾರಣಿಯಾಗಿದ್ದಾರೆ. ಪಕ್ಷ ಬೇಧವಿಲ್ಲದೆ ಸಾವಿರಾರು ಅಭಿಮಾನಿಗಳನ್ನು ಗಳಿಸುವ ಜತೆ ಎಲ್ಲರ ಪ್ರೀತಿ, ವಿಶ್ವಾಸಗಳಿಸಿಕೊಂಡಿದ್ದಾರೆ’ ಎಂದು ಹೇಳಿದರು.

ಮುಂಡರಗಿ ಅನ್ನದಾನೇಶ್ವರ ಸ್ವಾಮೀಜಿ, ಕೊಪ್ಪಳ ಗವಿಸಿದ್ಧೇಶ್ವರ ಸ್ವಾಮೀಜಿ, ವಳಬಳ್ಳಾರಿ ಸಿದ್ಧಲಿಂಗ ಸ್ವಾಮೀಜಿ, ಅಮರೇಶ್ವರ ಗುರುಗಜದಂಡ ಸ್ವಾಮೀಜಿ, ನಂದವಾಡಗಿ ಮಹಾಂತಲಿಂಗ ಸ್ವಾಮೀಜಿ, ಮಸ್ಕಿ ಗಚ್ಚಿನ ಮಠದ ವರರುದ್ರಮುನಿ ಸ್ವಾಮೀಜಿ, ಮುರುಘೇಂದ್ರ ಶಿವಯೋಗಿಗಳು, ಹುನಕುಂಟಿ ಶರಣಯ್ಯ ತಾತನವರು, ಸಂತೆಕೆಲ್ಲೂರಿನ ಗುರುಬಸವ ಸ್ವಾಮೀಜಿ, ಸಚಿವರಾದ ಶಿವಾನಂದ ಪಾಟೀಲ, ಎನ್.ಎಸ್.ಭೋಸರಾಜು, ಶರಣಬಸಪ್ಪ ದರ್ಶನಾಪುರ, ಶಾಸಕರಾದ ಬಸವರಾಜ ರಾಯರೆಡ್ಡಿ, ಬಿ.ಆರ್.ಪಾಟೀಲ, ಮಾನಪ್ಪ ವಜ್ಜಲ್, ಹಂಪಯ್ಯ ನಾಯಕ, ಕೆ.ಕರೆಮ್ಮ ನಾಯಕ, , ಡಾ.ಶಿವರಾಜ ಪಾಟೀಲ್, ಶರಣಗೌಡ ಪಾಟೀಲ ಬಯ್ಯಾಪುರ, ಮಾಜಿ ಸಂಸದರಾದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಮಾಜಿ ಸಚಿವರಾದ ಅಮರೇಗೌಡ ಪಾಟೀಲ ಬಯ್ಯಾಪುರ, ವೆಂಕಟರಾವ್ ನಾಡಗೌಡ, ಕೆ.ಶಿವನಗೌಡ ನಾಯಕ, ಮಾಜಿ ಶಾಸಕರಾದ ಪ್ರತಾಪಗೌಡ ಪಾಟೀಲ, ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ದೊಡ್ಡನಗೌಡ ಪಾಟೀಲ, ರಾಜಾ ವೆಂಕಟಪ್ಪ ನಾಯಕ, ಚಂದ್ರಶೇಖರಯ್ಯ ಸ್ವಾಮಿ, ವೀರಣ್ಣ ಚರಂತಿಮಠ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-32-191109519

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.