ಲಿಂಗಸುಗೂರು: ಪಟ್ಟಣದಲ್ಲಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್ಟಿಸಿ) ಆಸ್ತಿಗಳನ್ನು ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎಸ್.ಚಂದ್ರಶೇಖರ ಬುಧವಾರ ಪರಿಶೀಲಿಸಿದರು.

ಪಟ್ಟಣದ ಬಸ್ ನಿಲ್ದಾಣದ ಸುತ್ತಮುತ್ತಲಿನ ಖಾಲಿ ಜಾಗ, ಹಳೆಯ ಬಸ್ ನಿಲ್ದಾಣದ ಜಾಗೆ, ಸಾರಿಗೆ ನೌಕರರ ವಸತಿ ಗೃಹಗಳ ಹಿಂಬದಿ ಖಾಲಿ ಜಾಗ ಪರಿಶೀಲನೆ ನಡೆಸಿದರು. ಹಳೆಯ ಬಸ್ ನಿಲ್ದಾಣದ ಜಾಗದ ವ್ಯಾಜ್ಯ ಹೈಕೋರ್ಟ್ನಲ್ಲಿ ನಡೆಯುತ್ತಿದ್ದರಿಂದ ನಿಗಮಕ್ಕೆ ಸೇರಿದ ಖಾಲಿ ಜಾಗವನ್ನು ಹದ್ದುಬಸ್ತು ಮಾಡಬೇಕಾಗಿದೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಬೈಕ್ಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆಗೆ ಕಡಿವಾಣ ಹಾಕುವ ಉದ್ದೇಶದಿಂದ ಪೇ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದರು.

ಡಿಟಿಓ ಕೆ.ಎಲ್ ಚಂದ್ರಶೇಖರ, ಎಇಇ ಅಣ್ಣಪ್ಪ, ಘಟಕದ ವ್ಯವಸ್ಥಾಪಕ ಪ್ರಕಾಶ ದೊಡ್ಡಮನಿ ಹಾಗೂ ಇನ್ನಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-32-1728288839

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.