ಲಿಂಗಸುಗೂರು: 1996ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿ ಜಾರಿಗೊಳಿಸಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಸೆಸ್ ಕಾಯ್ದೆಗಳನ್ನು ಮರು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ನ (ಸಿಐಟಿಯು) ಪದಾಧಿಕಾರಿಗಳು ಸೋಮವಾರ ಶಾಸಕರಿಗೆ ಮನವಿ ಸಲ್ಲಿಸಿದರು.

‘ಕೇಂದ್ರ, ಏಪ್ರಿಲ್ 1ರಂದು ಕಾರ್ಮಿಕ ಸಂಹಿತೆಗಳ ಜಾರಿಗೆ ಮುಂದಾಗಿದೆ. ಈ ಮೂಲಕ ಕಾರ್ಮಿಕರ ಹಕ್ಕುಗಳು ಹಾಗೂ ಉದ್ಯೋಗದಾತರ ಕರ್ತವ್ಯಗಳನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದೆ’ ಎಂದು ದೂರಿದರು.

‘2025ರ ನವೆಂಬರ್ 21ರಂದು ಘೋಷಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳಲ್ಲಿ ವೃತ್ತಿ ಸಂಬಂಧಿ ಮತ್ತು ಕೆಲಸದ ಸುರಕ್ಷತೆ ಸಂಹಿತೆ–2020, ಸಾಮಾಜಿಕ ಸುರಕ್ಷತಾ ಸಂಹಿತೆ– 2020ಗಳಲ್ಲಿ ಹಾಲಿ ಇದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ–1996 ಹಾಗೂ ಸೆಸ್ ಕಾಯ್ದೆಗಳನ್ನು ವಿಲೀನಗೊಳಿಸಲಾಗಿದೆ. ಇದರಿಂದಾಗಿ ಕಾಯ್ದೆಯಡಿಯಲ್ಲಿ ಕಾರ್ಮಿಕರು ಪಡೆಯುತ್ತಿದ್ದ ರಕ್ಷಣೆ ಮತ್ತು ಸೌಲಭ್ಯಗಳ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರದ ಕಾರ್ಮಿಕ ಸಂಹಿತೆಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಬಾರದು’ ಎಂದು ಆಗ್ರಹಿಸಿದರು.

ಫೆಡರೇಶನ್ನ ಮುಖಂಡರಾದ ದಾವೂದ್, ಖಾಜಾಮಹಿನುದ್ದೀನ್, ಅಲ್ಲಾಬಕ್ಷಾ, ಮಹಾಂತೇಶ, ನಾಗರಾಜ ಹೊಸೂರು, ಸುಹೇರ್, ನಾಗರಾಜ ಕಂಚೂರು, ಬಾಬಾಜಾನಿ ಹಾಗೂ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-32-1429114821

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.