ಲಿಂಗಸುಗೂರು: ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ತಾಲ್ಲೂಕಿನ ಸರ್ಜಾಪುರ ಗ್ರಾಮದ ನಿವಾಸಿಗಳು ಶುಕ್ರವಾರ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.

ಸರ್ಜಾಪುರ ಗ್ರಾಮದ ಆಂಜನೇಯ ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕುರಿತು ಹಲವಾರಿ ಬಾರಿ ಪಿಡಿಒ, ಗ್ರಾ.ಪಂ ಆಡಳಿತಕ್ಕೆ ಮನವಿ ಮಾಡಿದರೂ ನಿರ್ಲಕ್ಷ್ಯ ಮಾಡಿದ್ದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ. ಇದರಿಂದ ಆಕ್ರೋಶಗೊಂಡ ನಿವಾಸಿಗಳು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ನೀರಿನ ಸಮಸ್ಯೆ ಪರಿಹರಿಸುವಂತೆ ಪಿಡಿಒಗೆ ದೂರವಾಣಿ ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿಲ್ಲ, ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದರು.

ವಾಸಿಗಳಾದ ಬಾಬಣ್ಣ ದಾಮ, ರಾಮಣ್ಣ ಗುಂಟಿ, ಜಡಿಯಪ್ಪ ಗೋಡಿಹಾಳ, ಸಂತೋಷ್ ಶೆಟ್ಟಿ, ಬಸವರಾಜ ಮುರಾಳ, ದೇವಿಂದ್ರ ಕರಡಕಲ್ ಸೇರಿದಂತೆ ಇನ್ನಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-32-928240517

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.