ಲಿಂಗಸುಗೂರು: ಪಟ್ಟಣದ ದೊಡ್ಡ ಹನುಮಂತ ದೇವಸ್ಥಾನದ ಮುಂಭಾಗದಲ್ಲಿ ಮಾರ್ಚ್ 31ರಂದು ಶಿವಾಜಿ ಮಹಾರಾಜ ಜಯಂತ್ಯುತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಕ್ಷತ್ರಿಯ ಸಮಾಜದ ಅಧ್ಯಕ್ಷ ಸತ್ಯನಾರಾಯಣಸಿಂಗ್ ಹೇಳಿದರು.

ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಕ್ಷತ್ರಿಯ ಸಮಾಜ ಹಾಗೂ ಹಿಂದೂಪರ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಅಂದು ಮಧ್ಯಾಹ್ನ 2ಗಂಟೆಗೆ ಪಟ್ಟಣದ ಲಕ್ಷ್ಮೀ ದೇವಸ್ಥಾನದಿಂದ ದೊಡ್ಡ ಹನುಮಂತ ದೇವಸ್ಥಾನದವರೆಗೆ ಬೈಕ್ ರ್ಯಾಲಿ ನಡೆಸಲಾಗುವುದು. ಸಂಜೆ 5ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ’ ಎಂದರು.

ಸಮಾರಂಭವನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಲಿದ್ದಾರೆ. ಅಮರೇಶ್ವರಗುರು ಗಜದಂಡ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ. ಬೀದರ್ನ ಈಶ್ವರ ಸಿಂಗ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಶಾಸಕ ಮಾನಪ್ಪ ವಜ್ಜಲ್, ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ ಸಿಂಗ್, ಎಂಎಲ್ಸಿ ಶರಣಗೌಡ ಬಯ್ಯಾಪುರ, ಮಾಜಿ ಸಚಿವರಾದ ಬಸವರಾಜ ಪಾಟೀಲ ಆನ್ವರಿ, ಅಮರೇಗೌಡ ಪಾಟೀಲ ಬಯ್ಯಾಪುರ, ಮಾಜಿ ಶಾಸಕ ಡಿ.ಎಸ್.ಹೂಲಗೇರಿ ಸೇರಿ ಅನೇಕರು ಭಾಗವಹಿಸುವರು ಎಂದರು.

ಚಂದಪ್ಪ ಕಟ್ಟಿಮನಿ, ರವಿಕುಮಾರ, ಮೋಹನಬಾಬು, ದುರ್ಗಾಸಿಂಗ್, ಗೌತಮಕುಮಾರ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-32-1183364756

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.