ಲಿಂಗಸುಗೂರು: ಪುರಸಭೆ ವ್ಯಾಪ್ತಿಯ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಶರಣಗೌಡ ಪಾಟೀಲ ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲ್ಲೂಕಿನ ಕಾಳಾಪುರ ಹತ್ತಿರದ ಕುಡಿಯುವ ನೀರಿನ ಕೆರೆಗೆ ಬುಧವಾರ ಬೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ‘ಕುಡಿಯುವ ನೀರಿನ ಕೊರತೆಯಾಗದಂತೆ ಕೆರೆ ತುಂಬಿಸಿ, ಈಗ ಕೆರೆಯಲ್ಲಿ ಇರುವ ನೀರು ಎರಡು ತಿಂಗಳಿಗೆ ಕೊರತೆಯಾಗುವ ಲಕ್ಷಣ ಇದ್ದರೆ ಮುಂಚಿತವಾಗಿ ನನಗೆ ತಿಳಿಸಿ, ನಾನು ಕೆಬಿಜೆಎನ್ಎಲ್ ಅಧಿಕಾರಿಗಳಿಗೆ ಹೇಳಿ ನಾರಾಯಣಪುರ ಬಲದಂಡೆ ನಾಲೆಗೆ ನೀರು ಹರಿಸುವಂತೆ ಕ್ರಮವಹಿಸುವೆ. ಯಾವುದೇ ಕಾರಣಕ್ಕೂ ಬೇಸಿಗೆ ಸಂದರ್ಭದಲ್ಲಿ ನೀರಿನ ಕೊರತೆಯಾಗದಂತೆ ಜಾಗೃತವಹಿಸಬೇಕು. ಒಂದು ವೇಳೆ ನಿರ್ಲಕ್ಷ್ಯವಹಿಸಿದರೆ ನಿಮ್ಮ ವಿರುದ್ಧ ಕ್ರಮಕ್ಕೆ ಮುಂದಾಗುವೆ’ ಎಂದು ಪುರಸಭೆ ಮುಖ್ಯಾಧಿಕಾರಿಗೆ ಎಚ್ಚರಿಕೆ ನೀಡಿದರು.

ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಕರಡಕಲ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪಾಮಯ್ಯ ಮುರಾರಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜಗೌಡ ಗಣೇಕಲ್, ಅಮರೇಶ ನಾಡಗೌಡ್ರು, ಸೋಮಶೇಖರ ಐದನಾಳ, ಶರಣಬಸವ ವಾರದ, ಪ್ರಮೋದ ಕುಲಕರ್ಣಿ, ಅನಿಷಾಪಾಶ, ವಿಜಯಕುಮಾರ ಹೊಸಗೌಡ್ರು, ಪುರಸಭೆ ಮುಖ್ಯಾಧಿಕಾರಿ ನಟರಾಜ ಹಾಗೂ ಇನ್ನಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-32-1472516431

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.