ಲಿಂಗಸುಗೂರು: ‘ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ಶುದ್ಧನೀರಿನ ಘಟಕ ನಡೆಸುತ್ತಿರುವವರ ವಿರುದ್ಧ ಶಿಸ್ತು ಕ್ರಮ ಜರಗಿಸಬೇಕು’ ಎಂದು ಆಗ್ರಹಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಮಂಗಳವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಪಟ್ಟಣದಲ್ಲಿ ಸರ್ಕಾರ ಮಾನದಂಡಗಳನ್ನು ಪಾಲಿಸದೇ ವಿವಿಧಡೆಯಲ್ಲಿ ಹಲವಾರು ಶುದ್ಧ ನೀರಿನ ಘಟಕಗಳನ್ನು ನಡೆಸಲಾಗುತ್ತಿದೆ. ಕೆಲವಡೆ ಪರವಾನಗಿ ಪಡೆಯದೇ ಕಾರ್ಯನಿರ್ವಹಿಸುತ್ತಿದ್ದು, ಗುಣಮಟ್ಟ ಪರೀಕ್ಷೆ ಮಾಡಿಸದೇ ನೀರು ಮಾರಾಟ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ ಎಂದು ಆರೋಪಿಸಿದರು.

‘ಇಂತಹ ನೀರಿನ ಘಟಕಗಳು ಸಾಕಷ್ಟು ಸಂಖ್ಯೆಯಲ್ಲಿ ತಲೆಎತ್ತಿವೆ, ಈ ಬಗ್ಗೆ ಪರಿಶೀಲನೆ ನಡೆಸಬೇಕಾದ ಪುರಸಭೆ ಅಧಿಕಾರಿಗಳು ಮೌನಕ್ಕೆ ಶರಣರಾಗಿರುವುದು ಸಾರ್ವಜನಿಕರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿದ್ದಾರೆ. ಈ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ ಅನಧಿಕೃತ ನೀರಿನ ಘಟಕಗಳ ವಿರುದ್ಧ ಕ್ರಮ ಜರಗಿಸಬೇಕು’ ಎಂದು ಆಗ್ರಹಿಸಿದರು.

ನಮ್ಮ ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ತಿಮ್ಮಾರೆಡ್ಡಿ ಮುನ್ನೂರು, ಪ್ರಧಾನ ಕಾರ್ಯದರ್ಶಿ ರಮೇಶ ಗುತ್ತೇದಾರ, ಬಸವರಾಜ ಕಕ್ಕೇರಿ, ಯಲ್ಲಪ್ಪ ಬಂಡಿ, ರವಿ ಗೊರೇಬಾಳ, ಅಶೋಕ ಗಸ್ತಿ, ಪ್ರವೀಣಕುಮಾರ, ಶ್ರೀಕಾಂತರೆಡ್ಡಿ ಮುನ್ನೂರು, ಈರಣ್ಣ ರೆಡ್ಡಿ, ಶ್ರೀರಾಮ ಸರ್ಜಾಪುರ, ಮೌನೇಶ ಹಾಗೂ ಇನ್ನಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-32-975785814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.