ಲಿಂಗಸುಗೂರು: ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ ನಾರಾಯಣಪುರ ಜಲಾಶಯದಿಂದ ಬಲದಂಡೆ ಕಾಲುವೆಗೆ ಹತ್ತು ದಿನಗಳ ಕಾಲ ನೀರು ಹರಿಸಲಾಗುತ್ತಿರುವ ಕಾರಣ ಕಾಲುವೆ ಸುತ್ತಮುತ್ತ 100 ಮೀಟರ್ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಪೂವಿತಾ ಎಸ್., ಶನಿವಾರ ಆದೇಶ ಹೊರಡಿಸಿದ್ದಾರೆ.

ಪುರಸಭೆ ವ್ಯಾಪ್ತಿಯ ಪ್ರದೇಶಗಳಿಗೆ ಕುಡಿಯುವ ನೀರಿಗಾಗಿ ತಾಲ್ಲೂಕಿನ ಕಾಳಾಪುರ ಕೆರೆ ತುಂಬಿಸುವ ಹಾಗೂ ತಾಲ್ಲೂಕಿನ ರೋಡಲಬಂಡಾ, ಜಂಗಿರಾಪುರ ತಾಂಡಾ, ಚಿಕ್ಕ ಉಪ್ಪೇರಿ, ತೊರಲಬೆಂಚಿ ಗ್ರಾಮಗಳ ಸಾರ್ವಜನಿಕರ ಕುಡಿಯುವ ನೀರಿನ ಉದ್ದೇಶಕ್ಕಾಗಿ ನೀರು ಪೂರೈಸಲು ನಾರಾಯಣಪುರ ಜಲಾಶಯದಿಂದ ಬಲದಂಡೆ ಕಾಲುವೆಗೆ 10 ದಿನಗಳ ಕಾಲ ಪ್ರತಿದಿನ 300 ಕ್ಯೂಸೆಕ್ನಂತೆ 0.26 ಟಿಎಂಸಿ ಅಡಿ ನೀರನ್ನು ಹರಿಸುವಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಆದೇಶವನ್ನು ಹೊರಡಿಸಿದ್ದಾರೆ.

‘ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಲುವೆ ನೀರು ಹರಿಸಲಾಗುತ್ತಿದೆ. ಈ ನೀರನ್ನು ಇತರೆ ಉದ್ದೇಶಕ್ಕೆ ಬಳಸದಂತೆ ನಿರ್ಬಂಧಿಸಿ, ಕಾನೂನು ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಬಲದಂಡೆ 0 ರಿಂದ 20 ಕಿ.ಮೀ ವರೆಗೆ ಮೇ 30ರಿಂದ ಜೂನ್ 9ವರೆಗೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ’ ಜಿಲ್ಲಾಧಿಕಾರಿ ಪೂವಿತಾ ಅವರು ಆದೇಶ ಹೊರಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-32-1516175517

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.