ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಸುಗೂರು: ಬಿಸಿಲಿನ ತಾಪಕ್ಕೆ ವ್ಯಕ್ತಿ ಸಾವು?

Published 3 ಏಪ್ರಿಲ್ 2024, 16:27 IST
Last Updated 3 ಏಪ್ರಿಲ್ 2024, 16:27 IST
ಅಕ್ಷರ ಗಾತ್ರ

ಲಿಂಗಸುಗೂರು (ರಾಯಚೂರು ಜಿಲ್ಲೆ): ಇಲ್ಲಿನ ಬಸ್ ನಿಲ್ದಾಣದಲ್ಲಿ ಬುಧವಾರ ವೃದ್ಧರೊಬ್ಬರು ಮೃತಪಟ್ಟಿದ್ದು, ಬಿಸಿಲಿನ ತಾಪದಿಂದ ಅಸ್ವಸ್ಥಗೊಂಡಿರಬೇಕು ಎಂದು ಶಂಕಿಸಲಾಗಿದೆ.

ಮಸ್ಕಿ ತಾಲ್ಲೂಕಿನ ಆನಂದಗಲ್ಲ ಗ್ರಾಮದ ಕೃಷ್ಣಪ್ಪ ಬಳ್ಳಾರೆಪ್ಪ (62) ಅವರು ರಕ್ತದ ಒತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯಿಂದ ಬಸ್‌ ನಿಲ್ದಾಣಕ್ಕೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಂದಾಗ ಬಿಸಿಲಿನ ತಾಪ ತಾಳದೇ ಮೃತಪಟ್ಟಬೇಕು ಎಂಬ ಶಂಕೆ ವ್ಯಕ್ತವಾಗಿದೆ. ರಾಯಚೂರಿನಲ್ಲಿ ಬುಧವಾರ ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್‌, ಪೊಲೀಸ್ ಇನ್‌ಸ್ಪೆಕ್ಟರ್ ಪುಂಡಲಿಕ ಪಟತರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮೃತ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದರು.

ಬಿಸಿಲಿನ ತಾಪದಿಂದಲೇ ಮೃತಪಟ್ಟಿದ್ದಾರೆಯೇ ಎಂಬ ಕುರಿತು ವೈದ್ಯರು ಖಚಿತಪಡಿಸಿಲ್ಲ. ಈ ಸಂಬಂಧ ದೂರು ಸಹ ದಾಖಲಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT