ಲಿಂಗಸುಗೂರು: ‘ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ ಆನ್ವರಿ ಅಭಿನಂದನಾ ಸಮಾರಂಭದ ಪ್ರಯುಕ್ತ ಅಭಿಮಾನಿಗಳು ಏಪ್ರಿಲ್ 18ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ’ ಎಂದು ಅಮರೇಶ್ವರ ಗುರು ಗಜದಂಡ ಶಿವಾಚಾರ್ಯರು ತಿಳಿಸಿದರು.

ಪಟ್ಟಣದ ಕೆಂಬ್ರಿಡ್ಜ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಆನ್ವರಿ ಕುರಿತ ಧ್ವನಿ ಸುರುಳಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

‘ಗ್ರಾಮ ಪಂಚಾಯಿತಿಯಿಂದ ಹಿಡಿದು ಕೇಂದ್ರದ ಸಚಿವರಾಗಿ ಜನಪರ ಕೆಲಸ ಮಾಡಿದ ಬಸವರಾಜ ಪಾಟೀಲ ಆನ್ವರಿ ಅವರ 83ನೇ ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿಗಳು ಏ.18ರಂದು ಪಟ್ಟಣದಲ್ಲಿ ವಿವಿಧ ಧಾರ್ಮಿಕ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದಾರೆ. ಇದೇ ವೇಳೆ ಅಭಿನಂದನಾ ಗ್ರಂಥ ಬಿಡುಗಡೆ ಮಾಡಲಾಗುತ್ತದೆ’ ಎಂದರು.

ಸಂತೆಕೆಲ್ಲೂರಿನ ಗುರುಬಸವ ಸ್ವಾಮೀಜಿ, ಹುನುಕುಂಟಿ ಶರಣಯ್ಯ ತಾತ, ಮಾತೆ ನಂದಿಕೇಶ್ವರಿ, ಎಂ.ಆರ್.ಪಾಟೀಲ, ಶಿವಕುಮಾರ ನಂದಿಕೋಲಮಠ, ಮಹಾಂತೇಶ ಗೌಡರ ಹಾಗೂ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-32-1490665457

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.