ಲಿಂಗಸುಗೂರು: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ನಿವಾಸಿಗಳು ಭಯಭೀತರಾಗಿದ್ದಾರೆ. ಕೂಡಲೇ ನಾಯಿಗಳ ಹಾವಳಿ ತಡೆಗಟ್ಟಬೇಕು ಎಂದು ಆಗ್ರಹಿಸಿ ನಿವಾಸಿಗಳು ಬುಧವಾರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಇತ್ತೀಚಿನ ದಿನಗಳಲ್ಲಿ ಪಟ್ಟಣದಲ್ಲಿ ಬೀದಿ ನಾಯಿಗಳು ಹಾಗೂ ಹುಚ್ಚು ನಾಯಿಗಳ ದಾಳಿಯಿಂದಾಗಿ 5 ಹಾಗೂ 9ನೇ ವಾರ್ಡ್ ಸೇರಿದಂತೆ ವಿವಿಧಡೆ ಮಕ್ಕಳು ಗಂಭೀರವಾಗಿ ಗಾಯಗೊಂಡು ರಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು ಎಂಟು ತಿಂಗಳುಗಳ ಹಿಂದೆ ಕಸಬಾ ಲಿಂಗಸುಗೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಾಲಕ ಮೃತಪಟ್ಟ ದುರ್ಘಟನೆ ನಡೆದಿತ್ತು. ಈ ರೀತಿಯ ಅನೇಕ ಘಟನೆಗಳು ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ನಿರಂತರವಾಗಿ ನಡೆಯುತ್ತಿವೆ. ಕೂಡಲೇ ಬೀದಿ ನಾಯಿಗಳ ಹಾವಳಿ ತಡೆಯಲು ತುರ್ತು ಕ್ರಮ ಜರುಗಿಸಬೇಕು. ಗಾಯಗೊಂಡ ಮಕ್ಕಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ನಿವಾಸಿಗಳಾದ ಬಾಬಾ ಜಾನಿ, ಜಾಫರ್ ಹುಸೇನ್ ಪೂಲವಾಲೆ, ಮೆಹಬೂಬ್ ಸಾಬ್, ಉಸ್ಮಾನ್ ಅಲಿ, ಮೆಹಬೂಬ್ ಸಾಬ್ ಮನಿಯಾರ, ಹಾಜಿ ಬಾಬಾ, ಐಯುಬ್, ಹುಲ್ಲಪ್ಪ ಭಜಂತ್ರಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-32-1757623890

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.