ಲಿಂಗಸುಗೂರು: ಪಟ್ಟಣದ ಎಸಿ ಕಚೇರಿ ಹಿಂದುಗಡೆ ಕಾಲೊನಿಯ ಮನೆಯಲ್ಲಿ ಅಳವಡಿಸಿದ್ದ ಎಸಿ ಬ್ಲಾಸ್ಟ್ ಆಗಿದ್ದರಿಂದ ದಟ್ಟವಾಗಿ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ ನಗದು ಹಣ, ಬಂಗಾರದ ಒಡೆವೆಗಳು ಸುಟ್ಟಕರಕಲಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಸುಮಂಗಲ ಮುದ್ದನಗೌಡ ಅವರ ಮನೆಯಲ್ಲಿ ಅಳವಡಿಸಿದ್ದ ಎಸಿಯ (ಹವಾನಿಯಂತ್ರಣ ಯಂತ್ರ) ಒಳಭಾಗದಲ್ಲಿ ಸ್ಫೋಟ ಸಂಭವಿಸಿದೆ. ಈ ವೇಳೆ ದಟ್ಟವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ನಗದು, ಚಿನ್ನ, ಬೆಳ್ಳಿ ಆಭರಣ, ಬಟ್ಟೆಗಳು, ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಮನೆಯ ಮಾಲೀಕರು ಮನೆಯಿಂದ ಹೊರಗಡೆ ಹೋಗಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-32-1406710710

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.