ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಲೋಕ ಅದಾಲತ್‌

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಟಿ.ಎನ್‌.ಇನವಳ್ಳಿ ಹೇಳಿಕೆ
Last Updated 25 ಜೂನ್ 2022, 15:33 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಸಾಕಷ್ಟು ಪ್ರಕರಣಗಳು ವಿಚಾರಣೆಗೆ ಬಾಕಿ ಉಳಿದಿವೆ. ರಾಜಿಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಗೊಳಿಸುವ ಉದ್ದೇಶಕ್ಕಾಗಿ ಲೋಕ ಅದಾಲತ್‌ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಟಿ.ಎನ್‌.ಇನವಳ್ಳಿ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ಪ್ರಕರಣಗಳು ವರ್ಷಾನುಗ್ಗಲೇ ಮುಂದೂಡಿಕೆ ಆಗುತ್ತವೆ. ಇಂತಹ ಪ್ರಕರಣಗಳಿಗಾಗಿ ಲೋಕ ಅದಾಲತ್‌ ಅನುಕೂಲಕರವಾಗಿದೆ ಎಂದರು.

ಲೋಕ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥ ಮಾಡಿಕೊಳ್ಳುವವರಿಗೆ ಯಾವುದೇ ರೀತಿಯಿಂದಲೂ ಶುಲ್ಕ ಕಟ್ಟುವ ಅಗತ್ಯ ಇರುವುದಿಲ್ಲ. ಕಕ್ಷಿದಾರರ ಎದುರಿನಲ್ಲಿಯೇ ರಾಜಿಸಂಧಾನ ಮಾಡಿಸುವ ಪ್ರಕ್ರಿಯೆ ನಡೆಸಲಾಗುತ್ತದೆ. ಲೋಕ ಅದಾಲತ್‌ಗೆ ಬಾರದ ಪ್ರಕರಣಗಳನ್ನು ಎಂದಿನಂತೆ ನ್ಯಾಯಾಲಯಗಳಲ್ಲಿ ವಿಚಾರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಲೋಕ ಅದಾಲತ್‌ ಬಡವರಿಗೆ ಬಹಳ ಅನುಕೂಲಕರ. ರಾಜೀಸಂಧಾನದ ಮೂಲಕ ಉಚಿತವಾಗಿಯೇ ಪ್ರಕರಣಗಳು ಇತ್ಯರ್ಥವಾಗುತ್ತವೆ. ನ್ಯಾಯಾಲಯಗಳಲ್ಲಿ ಪ್ರಕರಣಗಳು ವಿಳಂಬವಾಗಿ ಇತ್ಯರ್ಥವಾಗುತ್ತವೆ ಎನ್ನುವ ಸಾಮಾನ್ಯ ಭಾವನೆ ಸಾರ್ವಜನಿಕರಲ್ಲಿದೆ. ಈ ಅಭಿಪ್ರಾಯವನ್ನು ಬದಲಿಸುವುದಕ್ಕಾಗಿ ದೇಶದಾದ್ಯಂತ ನ್ಯಾಯಾಲಯಗಳಲ್ಲಿ ಉಚಿತವಾಗಿಯೇ ಲೋಕ ಅದಾಲತ್‌ಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಇದುವರೆಗೂ ಬಗೆಹರಿಲಾರದ ಪ್ರಕರಣಗಳನ್ನು ಲೋಕ ಅದಾಲತ್‌ ಮೂಲಕ ಇತ್ಯರ್ಥ ಪಡಿಸಲಾಗುವುದು. ಕಕ್ಷಿದಾರರು ಇದರ ಸದುಪಯೋಗ ಮಾಡಿಕೊಳ್ಳುವುದಕ್ಕೆ ಮುಂದೆ ಬರಬೇಕು ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ನ್ಯಾ. ದಯಾನಂದ ಬೇಲೂರೆ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT