ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಬಿಜೆಪಿಯಿಂದ ಮಹಿಳೆಯರ, ರೈತರ ಅಭಿವೃಧ್ಧಿಗೆ ಸಂಕಲ್ಪ’

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಹೇಳಿಕೆ
Published 15 ಏಪ್ರಿಲ್ 2024, 16:22 IST
Last Updated 15 ಏಪ್ರಿಲ್ 2024, 16:22 IST
ಅಕ್ಷರ ಗಾತ್ರ

ರಾಯಚೂರು: ‘ದೇಶದ ರೈತರು, ಮಹಿಳೆಯರು, ಯುವಜನರ ಹಾಗೂ ಬಡವರ ಅಭಿವೃದ್ಧಿಯ ದಿಸೆಯಲ್ಲಿ ಬಿಜೆಪಿಯ ಪ್ರಣಾಳಿಕೆಯನ್ನು ಪ್ರಧಾನಿ ಮೋದಿಯವರು ಬಿಡುಗಡೆಗೊಳಿಸಿದ್ದಾರೆ‘ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ತಿಳಿಸಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು.

‘ದೇಶದ ಮೂರು ಕೋಟಿ ಮಹಿಳೆಯರಿಗೆ ಲಕ್ಷಾದಿಪತಿ ಮಾಡಲು ಲಕ್ ಪತಿ ದೀದಿ ಯೋಜನೆ, ಸ್ವಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ, ಆಯುಷ್ ಮಾನ್ ಭಾರತ ಯೋಜನೆ ಹಿರಿಯ ನಾಗರಿಕರಿಗೆ ವಿಸ್ತರಣೆ, ಬಡತನ ನಿವಾರಣೆಗೆ ಉಚಿತ ಪಡಿತ ಅಕ್ಕಿ ವಿತರಣೆ 5 ವರ್ಷಕ್ಕೆ ಮುಂದುವರಿಕೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲಿದ್ದಾರೆ’ ಎಂದು ಹೇಳಿದರು.

‘ನಾನು ಐದು ವರ್ಷ ಸಂಸದನಾಗಿ ರೈಲ್ವೆ ಯೋಜನೆಗಳಿಗೆ ಅನುದಾನ, ಪ್ಲಾಟ್ ಫಾರ್ಮ್ ವಿಸ್ತರಣೆ, ರಾಷ್ಟ್ರೀಯ ಹೆದ್ದಾರಿ, ನನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿಗೆ ತ್ವರಿತ ಚಾಲನೆಗೆ ಒತ್ತುಕೊಟ್ಟಿರುವೆ. ಏಮ್ಸ್ ವಿಚಾರವಾಗಿ ಕೇಂದ್ರ ಸಚಿವರು, ಪ್ರಧಾನಮಂತ್ರಿಯವರಿಗೆ ಮನವಿ ಮಾಡಿದ್ದೇನೆ. ಗದಗ –ವಾಡಿ ರೈಲ್ವೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಲಿಂಗಸೂಗೂರು– ಸುರಪೂರು ರೈಲ್ವೆ ಯೋಜನೆಗೆ ಟೆಂಡರ್ ಕರೆಯಲಾಗಿದೆ’ ಎಂದು ಹೇಳಿದರು.

ಶಾಸಕ ಡಾ.ಶಿವರಾಜ ಪಾಟೀಲ ಮಾತನಾಡಿ, ‘ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎದು ಆರೋಪಿಸುವ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಹುರುಳಿಲ್ಲ. ಕೇಂದ್ರ ಸರ್ಕಾರ ವಸತಿ ಯೋಜನೆಯಡಿ ₹7,500 ಮನೆಗಳ ನಿರ್ಮಾಣ ಮಾಡಿದೆ. 60 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ ಸಾಧನೆ ಹಾಗೂ 10 ವರ್ಷದ ಬಿಜೆಪಿ ಸರ್ಕಾರದ ಸಾಧನೆ ಹೋಲಿಕೆ ಮಾಡಿ ನೋಡಿದರೆ ಸತ್ಯ ಗೊತ್ತಾಗುತ್ತದೆ’ ಎಂದು ಹೇಳಿದರು.

ಬಿಜೆಪಿಯಲ್ಲಿ ಭಿನ್ನಮತವಿಲ್ಲ. ಕಾರ್ಯಕರ್ತರಲ್ಲಿ ಇದ್ದ ಗೊಂದಲ ನಿವಾರಣೆಯಾಗಿದೆ. ಬಿ.ವಿ ನಾಯಕ ಅವರ ಕೈಯಿಂದಲೇ ರಾಜಾ ಅಮರೇಶ್ವರ ನಾಯಕ ಅವರಿಗೆ ಬಿ ಫಾರ್ಮ್ ನೀಡಲಾಗಿದೆ. ಅವರು ಶೀಘ್ರವೇ ಪ್ರಚಾರ ಕಾರ್ಯದಲ್ಲಿ ತೊಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಪ್ರಣಾಳಿಕೆಯ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ ಬಗ್ಗೆ ಪ್ರತಿಕ್ರಿಯಿಸಿದ ಅವರು. ‘ಪ್ರಿಯಾಂಕ್‌ ಫ್ಯಾನ್ಸಿ ಹೇಳಿಕೆ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಸಣ್ಣ ನಾಯಕ, ಪ್ರಿಯಾಂಕ್ ಖರ್ಗೆ ಅವರೇ ದೊಡ್ಡನಾಯಕ‘ ಎಂದು ಲೇವಡಿ ಮಾಡಿದರು.

‘ರಾಜಾ ಅಮರೇಶ್ವರ ನಾಯಕ ಅವರು ಏಪ್ರಿಲ್ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ನಗರದ ರೈತ ಭವನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರೋಡ್ ಶೋ ನಡೆಯಲಿದೆ. ತೆಲುಗು ನಟ ಪವನ್ ಕಲ್ಯಾಣ ಅಂದು ಭಾಗವಹಿಸುವುದು ಅನುಮಾನ ಆನಂತರ ಪ್ರಚಾರಕ್ಕೆ ಖಂಡಿತ ಬರುತ್ತಾರೆ. ಇನ್ನು ದಿನಾಂಕ ನಿಗದಿಯಾಗಿಲ್ಲ. ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ಮನವಿ ಮಾಡಿದ್ದು ಆಗಮಿಸುವ ನಿರೀಕ್ಷೆ ಇದೆ’ ಎಂದರು.

‘ಗ್ಯಾರಂಟಿ ಯೋಜೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಒಪ್ಪುವುದಿಲ್ಲ’ ಆದರೆ, ಗ್ಯಾರಂಟಿ ಯೋಜನೆಯಿಂದ ಜನರಿಗೆ ಹೊರೆಯಾಗುತ್ತಿದೆ. ಪ್ರತಿಯೊಬ್ಬರ ತಲೆ ಮೇಲೆ ₹31 ಸಾವಿರ ತೆರಿಗೆ ಹೊರೆ ಬೀಳಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT