ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Lok Sabha Election: ಮತದಾನ ಜಾಗೃತಿಗೆ ಸೈಕಲ್‌ ಜಾಥಾ

Published 29 ಮಾರ್ಚ್ 2024, 15:55 IST
Last Updated 29 ಮಾರ್ಚ್ 2024, 15:55 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ರಾಯಚೂರು ರೈಡರ್ಸ್‌ ವತಿಯಿಂದ ಮತದಾನ ಜಾಗೃತಿ ಮೂಡಿಸಲು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಸೈಕಲ್ ಜಾಥಾ ನಡೆಸಲಾಯಿತು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ್ ಪಾಂಡ್ವೆ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ‘ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು‘ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮೊದಲು ಮತದಾರರಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಸೈಕಲ್ ಜಾಥಾವು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹೊರಟು ಚಂದ್ರಮೌಳೇಶ್ವರ ವೃತ್ತ, ಸರ್ದಾರ್‌ ವಲ್ಲಭಬಾಯಿ ಪಟೇಲ್‌ ವೃತ್ತ, ಬಿಆರ್‌ಬಿ ವೃತ್ತ, ಐಬಿ ರಸ್ತೆ, ರೈಲು ನಿಲ್ದಾಣ ವೃತ್ತ, ಡಾ.ಬಿ.ಆರ್‌ ಅಂಬೇಡ್ಕರ್‌ ವೃತ್ತದ ಮೂಲಕ ನಗರ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಬಂದು ಸಮಾರೋಪಗೊಂಡಿತು.

ಜಿಲ್ಲಾ ಸ್ವೀಪ್‌ ನೋಡೆಲ್‌ ಅಧಿಕಾರಿ ಡಾ.ಬಿ.ವೈ ವಾಲ್ಮೀಕಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಈರೇಶ ನಾಯಕ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯಶಂಕರ, ಮತದಾರರ ಸಾಕ್ಷಾರತ ಕ್ಲಬ್‌ನ ದಂಡಪ್ಪ ಬಿರಾದಾರ, ರಾಯಚೂರು ರೈಡರ್ಸ್‌ನ ಡಾ.ಬಸವರಾಜ, ಡಾ.ಜಯಪ್ರಕಾಶ ಪಾಟೀಲ, ಡಾ.ಗೋಪಿನಾಥ, ಸಕಲೇಶ, ಡಾ.ರಮೇಶ, ಡಾ.ಮಲ್ಲಿಕಾರ್ಜುನ, ಡಾ.ನಾಗರಾಜ, ಡಾ.ಬಸನಗೌಡ, ಚನ್ನಪ್ಪ, ಡಾ.ಮಂಜುನಾಥ ಹಟ್ಟಿ, ಡಾ.ರವಿ, ಡಾ.ಶರಣಗೌಡ, ಡಾ.ಸುನೀಲ್, ನಗರಸಭೆ ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT