ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರದ ಅಭಿವೃದ್ಧಿಗೆ ₹34ಸಾವಿರ ಕೋಟಿ ಮಂಜೂರು: ಅಮರೇಶ್ವರ ನಾಯಕ

ಪ್ರಚಾರ ಸಭೆಯಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿಕೆ
Published 26 ಏಪ್ರಿಲ್ 2024, 4:51 IST
Last Updated 26 ಏಪ್ರಿಲ್ 2024, 4:51 IST
ಅಕ್ಷರ ಗಾತ್ರ

ನೀರಮಾನ್ವಿ(ಮಾನ್ವಿ): ’ಐದು ವರ್ಷಗಳ ಅವಧಿಯಲ್ಲಿ ₹34ಸಾವಿರ ಕೋಟಿ ಅನುದಾನ ಮಂಜೂರು ಮಾಡಿಸುವ ಮೂಲಕ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ' ಎಂದು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಹೇಳಿದರು.

ತಾಲ್ಲೂಕಿನ ನೀರಮಾನ್ವಿ ಗ್ರಾಮದಲ್ಲಿ ಬಿಜೆಪಿ ಮಾನ್ವಿ ಮಂಡಲದ ವತಿಯಿಂದ ಲೋಕಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದರು.

’ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕನ್ನು ಹಸನಾಗಿಸುವ ಮತ್ತು ದೇಶದ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಮತ್ತೊಮ್ಮೆ ಆರ್ಶೀವದಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಬೇಕು' ಎಂದು ಅವರು ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ, ಮಾಜಿ ಸಂಸದ ಬಿ.ವಿ ನಾಯಕ, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ಮಾಜಿ ಶಾಸಕರಾದ ಬಸನಗೌಡ ಬ್ಯಾಗವಾಟ ಹಾಗೂ ಗಂಗಾಧರ ನಾಯಕ, ಬಿಜೆಪಿ ಮಂಡಲ ಅಧ್ಯಕ್ಷ ಜೆ.ಸುಧಾಕರ, ಮುಖಂಡರಾದ ಜೆ.ಶರಣಪ್ಪಗೌಡ ಸಿರವಾರ, ಮಲ್ಲನಗೌಡ ನಕ್ಕುಂದಿ, ಉಮೇಶ ಸಜ್ಜನ್, ಶರಣಪ್ಪಗೌಡ ನಕ್ಕುಂದಿ, ಕೊಟ್ರೇಶಪ್ಪ ಕೋರಿ, ಎಂ.ಸಿದ್ದನಗೌಡ ನೆಲಹಾಳ, ಎಂ.ಮಲ್ಲಿಕಾರ್ಜುನ ಪೋತ್ನಾಳ, ಮ್ಯಾಕಲ್ ಅಯ್ಯಪ್ಪ ನಾಯಕ, ವೀರೇಶ ನಾಯಕ ಬೆಟ್ಟದೂರು ಮತ್ತಿತರರು ಭಾಗವಹಿಸಿದ್ದರು.

ಜೆಡಿಎಸ್ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

ಮಾನ್ವಿ: ಲೋಕಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ಗುರುವಾರ ಪಟ್ಟಣಕ್ಕೆ ಆಗಮಿಸಿದ ಬಿಜೆಪಿ ಪಕ್ಷದ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರನ್ನು ಜೆಡಿಎಸ್ ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.

ಪಟ್ಡಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ತೆರೆದ ವಾಹನದಲ್ಲಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ, ಮಾಜಿ ಶಾಸಕರಾದ ಗಂಗಾಧರ ನಾಯಕ ಹಾಗೂ ರಾಜಾ ವೆಂಕಟಪ್ಪ ನಾಯಕ ಮತ್ತಿತರ ಗಣ್ಯರನ್ನು ಮೆರವಣಿಗೆ ಮೂಲಕ ಕಾರ್ಯಕ್ರಮ ಆಯೋಜಿಸಿದ್ದ ವಾಸವಿ ಕಲ್ಯಾಣ ಮಂಟಪಕ್ಕೆ ಕರೆದೊಯ್ಯಲಾಯಿತು.

ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಬೈಕ್ ಗಳ (ಬೈಕ್ ರ್ಯಾಲಿ) ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ನಂತರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಜೆಡಿಎಸ್ ಪಕ್ಷದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, 'ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಿರ್ದೇಶನದಂತೆ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಗೆಲುವಿಗೆ ಶ್ರಮಿಸಬೇಕು' ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಮಾತನಾಡಿ, 'ದೇಶದ ಸುರಕ್ಷತೆ ಹಾಗೂ ಅಭಿವೃದ್ಧಿಗೆ ಮತ್ತೊಮ್ಮೆ ನರೇಂದ್ರ ಮೋದಿ ನಾಯಕತ್ವ ಅಗತ್ಯ' ಎಂದರು.

ಬಿಜೆಪಿಯ ಮಾಜಿ ಶಾಸಕ ಗಂಗಾಧರ ನಾಯಕ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಎಂ.ವಿರೂಪಾಕ್ಷಿ, ಮುಖಂಡರಾದ ಜೆ.ಶರಣಪ್ಪಗೌಡ ಸಿರವಾರ, ಮಹಾಂತೇಶ ಪಾಟೀಲ ಅತ್ತನೂರು, ಮಲ್ಲನಗೌಡ ನಕ್ಕುಂದಿ, ಎನ್.ಶಿವಶಂಕರ, ಮಲ್ಲಿಕಾರ್ಜುನ ಗೌಡ ಬಲ್ಲಟಗಿ, ರಾಜಾ ಮಹೇಂದ್ರ ನಾಯಕ, ರಾಜಾ ರಾಮಚಂದ್ರ ನಾಯಕ, ಖಲೀಲ್ ಖುರೇಷಿ, ಜೆ.ಎಚ್.ದೇವರಾಜ, ಶಿವರಾಜ ನಾಯಕ, ಶರಣಪ್ಪ ಮೇದಾ, ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಾನ್ವಿಯಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರನ್ನು ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಸ್ವಾಗತಿಸಿದರು
ಮಾನ್ವಿಯಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರನ್ನು ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಸ್ವಾಗತಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT