ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಂಧನೂರು ಕ್ಷೇತ್ರದಲ್ಲಿ 269 ಮತಗಟ್ಟೆ ಕೇಂದ್ರ: ತಹಶೀಲ್ದಾರ್ ಅರುಣ್

Published 3 ಏಪ್ರಿಲ್ 2024, 14:14 IST
Last Updated 3 ಏಪ್ರಿಲ್ 2024, 14:14 IST
ಅಕ್ಷರ ಗಾತ್ರ

ಸಿಂಧನೂರು: ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ತಾಲೂಕು ಆಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ತಿಳಿಸಿದರು.

ಬುಧವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೊಪ್ಪಳ ಲೋಕಾಸಭಾ ಕ್ಷೇತ್ರದಲ್ಲಿನ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ 1,25,413 ಮಹಿಳೆ, 1,18,893 ಪುರುಷ ಮತದಾರರು ಹಾಗೂ ಇತರೆ 23 ಮತದಾರರು ಸೇರಿ ಒಟ್ಟು 2,44,215 ಮತದಾರರಿದ್ದಾರೆ. 4,715 ಯುವ ಮತದಾರರು ಹೆಸರು ಹೊಸದಾಗಿ ಸೇರ್ಪಡೆಯಾಗಿದೆ. ವಿಕಲಚೇತನರು 3062 ಹಾಗೂ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕ ಮತದಾರರು 1393 ಇದ್ದಾರೆ. ಇವರಿಗೆ ಮನೆಯಲ್ಲಿ ಕುಳಿತು ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ. ಒಟ್ಟು 269 ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದ್ದು, ಅದರಲ್ಲಿ 65 ಸೂಕ್ಷ್ಮ, 5 ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

58-ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮತದಾರರು ನಿರ್ಭೀತಿಯಿಂದ ಮತಗಟ್ಟೆಗಳಿಗೆ ಬಂದು ಮತ ಚಲಾವಣೆ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಬೇಕು ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT