ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ರಾಯಚೂರು: ಐವರಿಂದ ಏಳು ನಾಮಪತ್ರ ಸಲ್ಲಿಕೆ

Published 18 ಏಪ್ರಿಲ್ 2024, 14:27 IST
Last Updated 18 ಏಪ್ರಿಲ್ 2024, 14:27 IST
ಅಕ್ಷರ ಗಾತ್ರ

ರಾಯಚೂರು: ಲೋಕಸಭೆ ಚುನಾವಣೆಗೆ ಸ್ಪರ್ಧೆ ಬಯಸಿ ಐವರು ಅಭ್ಯರ್ಥಿಗಳಿಂದ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆ ಆಗಿವೆ.

ಬಿಜೆಪಿ ಅಧಿಕೃತ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಎರಡು ನಾಮಪತ್ರ, ಬಿಜೆಪಿಯಿಂದಲೇ ಎ.ಭಗವಂತರಾಯ ವೆಂಕಟೇಶ ಹೆಸರಿನಲ್ಲಿ ಅವರ ಸೂಚಕರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್‌ ಅಭ್ಯರ್ಥಿ ಜಿ.ಕುಮಾರ ನಾಯಕ ಎರಡು ನಾಮಪತ್ರಗಳನ್ನು ಸಲ್ಲಿಸಿದರು.

ಪಕ್ಷೇತ್ರ ಅಭ್ಯರ್ಥಿಗಳಾಗಿ ನರಸಿಂಹ ನಾಯಕ ಹಾಗೂ ಅಮರೇಶ ಸವಾರಪ್ಪ ತಲಾ ಒಂದೊಂದು ನಾಮಪತ್ರವನ್ನು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಅಶೋಕ ದುಡಗುಂಟಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಸಾಹಿತ್ಯ ಆಲದಕಟ್ಟಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT