ರಾಯಚೂರು: ‘ಜಿಲ್ಲೆಯ ಅನೇಕ ಇಲಾಖೆಗಳ ಕಚೇರಿಗಳಲ್ಲಿ ನೌಕರರ ಹಾಜರಾತಿ ವಹಿ, ಚಲನ ವಹಿ, ನಗದು ವಹಿಗಳನ್ನು ಸರಿಯಾಗಿ ನಿರ್ವಹಿಸದೇ ಲೋಪ ಎಸಗುತ್ತಿರುವುದು ಲೋಕಾಯುಕ್ತ ತಂಡ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ವೇಳೆ ಕಂಡು ಬಂದಿದೆ. ಹಿರಿಯ ಅಧಿಕಾರಿಗಳು ಗಂಭೀರವಾಗಿರದ ಕಾರಣ ಕೆಳ ಹಂತದ ಸಿಬ್ಬಂದಿಯಲ್ಲೂ ಅಶಿಸ್ತು ಮನೆ ಮಾಡಿದೆ’ ಎಂದು ಕರ್ನಾಟಕ ಲೋಕಾಯುಕ್ತದ ಕಾರ್ಯದರ್ಶಿ ಶ್ರೀನಾಥ ಕೆ. ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ಲೋಕಾಯುಕ್ತರಿಂದ ನಡೆದ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ರಾಯಚೂರು ಜಿಲ್ಲೆಯಲ್ಲಿ ಕಚೇರಿ ಶಿಸ್ತು ಪಾಲನೆಯಾಗುತ್ತಿಲ್ಲ. ಅಧಿಕಾರಿಗಳು ಮತ್ತು ಸಿಬ್ಬಂದಿ ಗುರುತಿನ ಚೀಟಿ ಧರಿಸದೇ ಕೆಲಸ ನಿರ್ವಹಣೆ ಮಾಡುತ್ತಿದ್ದಾರೆ. ಗ್ರೂಪ್–ಡಿ ಸೇರಿದಂತೆ ಬೇರೆ ಬೇರೆ ಸಿಬ್ಬಂದಿಗೆ ನಿಗದಿಪಡಿಸಿದ ಡ್ರೆಸ್ ಕೋಡ್ ಪಾಲನೆಯಾಗಿಲ್ಲ. ಕಚೇರಿಗೆ ಹೋದಾಗ ಯಾರು, ಏನು ಎಂದು ಏನೂ ತಿಳಿಯುವುದಿಲ್ಲ. ಕಚೇರಿಗಳಲ್ಲಿ ನಾಮಫಲಕಗಳು ಇಲ್ಲ. ಇದು ಕೂಡಲೇ ಸರಿಯಾಗಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ಈ ದಿಸೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಎಲ್ಲ ಕಚೇರಿಗಳಿಗೆ ಸುತ್ತೋಲೆ ರವಾನಿಸಿ ತಿಳಿಸಿದಾಗ್ಯೂ ಲೋಕಾಯುಕ್ತ ಅಧಿಕಾರಿಗಳ ಮಾಹಿತಿಯ ಫಲಕಗಳನ್ನು ಬಹುತೇಕ ಕಚೇರಿಗಳಲ್ಲಿ ಅಳವಡಿಸಿಲ್ಲ. ಸರ್ಕಾರಿ ನೌಕರರಿಗೆ ಅನ್ವಯಿಸುವ ಎಲ್ಲ ನಿಯಮಗಳು ಹೊರಗುತ್ತಿಗೆ ನೌಕರರಿಗೂ ಅನ್ವಯಿಸುತ್ತವೆ. ಆದಾಗ್ಯೂ ಹೊರಗುತ್ತಿಗೆ ನೌಕರರ ಹಾಜರಾತಿ ವಹಿಯನ್ನು ಬಹುತೇಕ ಕಚೇರಿಗಳಲ್ಲಿ ನಿರ್ವಹಣೆ ಮಾಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ತಪ್ಪಿತಸ್ಥ ಸರ್ಕಾರಿ ನೌಕರರ ವಿರುದ್ಧ ಕ್ರಮ ವಹಿಸುವುದಷ್ಟೇ ನಮ್ಮ ಕೆಲಸವಲ್ಲ; ಸರ್ಕಾರದ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವುದು ಸಹ ನಮ್ಮ ಕಾರ್ಯವಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಸರ್ಕಾರದ ಮಾರ್ಗಸೂಚಿ ಅಂಶಗಳನ್ನು ಪಾಲನೆ ಮಾಡಬೇಕು’ ಎಂದು ತಿಳಿಸಿದರು.

‘ಜನವರಿ 2ರಿಂದ 7ರವರೆಗೆ ರಾಯಚೂರು ಜಿಲ್ಲೆಯ ವಿವಿಧೆಡೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಕಂಡುಬಂದ ಲೋಪಗಳಿಗೆ ಸಂಬಂಧಿಸಿದಂತೆ ಪೊಲೀಸ್ ಹಾಗೂ ನ್ಯಾಯಾಂಗ ಇಲಾಖೆಯ ಅಧಿಕಾರಿಗಳಿಂದ ವರದಿ ಪಡೆದು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

‘ಗಂಭೀರ ಪ್ರಕರಣ ಎಂದು ಕಂಡುಬಂದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಯಾರಾದರೂ ಅಧಿಕಾರಿಗಳು ಮತ್ತು ಸಿಬ್ಬಂದಿ ತಪ್ಪು ಮಾಹಿತಿ ನೀಡಿದಲ್ಲಿ ಮತ್ತೆ ಜಿಲ್ಲಾ ಲೋಕಾಯುಕ್ತ ಅಧೀಕ್ಷಕರಿಂದ ಪರಿಶೀಲಿಸಿ ವರದಿ ಪಡೆದು ದೂರು ದಾಖಲಿಸಲಾಗುವುದು’ ಎಂದು ತಿಳಿಸಿದರು.

ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತದ ಹೆಚ್ಚುವರಿ ನಿಬಂಧಕ ಎ.ವಿ.ಪಾಟೀಲ, ರಾಯಚೂರು ಜಿಲ್ಲಾ ಕರ್ನಾಟಕ ಲೋಕಾಯುಕ್ತ ಅಧೀಕ್ಷಕ ಸತೀಶ ಚಿಟಗುಬ್ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷು ಗಿರಿ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ, ಲೋಕಾಯುಕ್ತ ಡಿವೈಎಸ್ಪಿ ರವಿ ಪುರುಷೋತ್ತಮ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಉಪಸ್ಥಿತರಿದ್ದರು.

‘ಸೂಕ್ತ ಮಾರ್ಗದರ್ಶನಕ್ಕೆ ವರದಿ’

‘ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವುದಕ್ಕಾಗಿ ಲೋಕಾಯುಕ್ತ ತಂಡ ಭೇಟಿ ನೀಡಿ ಪರಿಶೀಲಿಸಿ ಪಟ್ಟಿ ಮಾಡಿದ ಲೋಪಗಳ ಸಮಗ್ರ ವರದಿಯನ್ನು ಜಿಲ್ಲಾಧಿಕಾರಿಗೆ ನೀಡಲಾಗುವುದು’ ಎಂದು ಕಾರ್ಯದರ್ಶಿಗಳು ತಿಳಿಸಿದರು.

‘ನಮ್ಮ ಹಂತದಲ್ಲೇ ಕ್ರಮ’: ‘ಬೇರೆ ಬೇರೆ ಇಲಾಖೆಗಳಲ್ಲಿನ ಲೋಪದ ಬಗ್ಗೆ ಲೋಕಾಯುಕ್ತರು ನೀಡಿದ ಪಟ್ಟಿಯ ಆಧಾರದ ಮೇಲೆ ನಮ್ಮ ಹಂತದಲ್ಲಿಯೇ ಸರಿಪಡಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದರು.

‘ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಹೆಚ್ಚಿನ ಒತ್ತು ಕೊಡಲಾಗುವುದು. ಮುಂದಿನ ವಾರ ಎಲ್ಲ ಅಧಿಕಾರಿಗಳ ಸಭೆ ಕರೆದು ಪುನಃ ಚರ್ಚಿಸಲಾಗುವುದು. ಲೋಕಾಯುಕ್ತರ ಭೇಟಿಯ ಬಿಸಿ ಇಲ್ಲಿಗೆ ಮುಗಿಯುವುದಿಲ್ಲ. ತಪ್ಪಿತಸ್ಥರಿಗೆ ಇನ್ನು ಮುಂದೆ ನೋಟಿಸ್ ಬರುತ್ತವೆ. ಅಧಿಕಾರಿಗಳು ನೋಟಿಸ್ ಅನ್ನು ಹಗುರವಾಗಿ ಪರಿಗಣಿಸದೇ ಕೂಡಲೇ ಉತ್ತರ ನೀಡಬೇಕು. ಪ್ರಕರಣ ಗಂಭೀರ ಸ್ವರೂಪ ಪಡೆದಲ್ಲಿ ಕ್ರಿಮಿನಲ್ ಪ್ರಕರಣ ಎದುರಿಸಬೇಕಾಗುವುದು’ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.