ರಾಯಚೂರು: ಜಿಲ್ಲಾ ಲೋಕಾಯುಕ್ತ ಪೊಲೀಸರ ವತಿಯಿಂದ ಇದೇ ಸೆ.25ರಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲೆಯ ಸಿಂಧನೂರು ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳ ಸಭೆ ಏರ್ಪಡಿಸಲಾಗಿದೆ.

ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳನ್ನು ಹೇಳಿಕೊಳ್ಳಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎನ್.ಶಶಿಧರ ತಿಳಿಸಿದ್ದಾರೆ.

ಮೂರು ದಿನಗಳ ಕಮ್ಮಟಕ್ಕೆ ಅರ್ಜಿ ಆಹ್ವಾನ

ರಾಯಚೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ವಿಷಯವಾಗಿ ಮೂರು ದಿನಗಳ ಕಮ್ಮಟವನ್ನು ಅಕ್ಟೋಬರ್ ಕೊನೆಯ ವಾರದಲ್ಲಿ ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆಸಲಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

20ರಿಂದ 45 ವರ್ಷ ವಯಸ್ಸಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಅ.8ರೊಳಗೆ ಅರ್ಜಿ ಸಲ್ಲಿಸಬಹುದು. ವಿವರಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ಸೈಟ್ ವೀಕ್ಷಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ತಿಳಿಸಿದ್ದಾರೆ.

ತಾತ್ಕಾಲಿಕ ಕರಡು ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ರಾಯಚೂರು: ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕರ ಹುದ್ದೆಗಳಿಗೆ ತಾತ್ಕಾಲಿಕ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯಲ್ಲಿ ಖಾಲಿ ಇರುವ 22 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಿಗೆ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿ, ಅದರಂತೆ ಪರಿಶೀಲಿಸಿದ ದಾಖಲಾತಿಗಳ ಆಧಾರದ ಮೇಲೆ ಆಯ್ಕೆಯಾದ ಗ್ರಂಥಾಲಯ ಮೇಲ್ವಿಚಾರಕರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ.

ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಕ್ಷೇಪಣೆಗಳಿದ್ದಲ್ಲಿ ಅ.8ರೊಳಗಾಗಿ ನೇರವಾಗಿ ಜಿಲ್ಲಾ ಪಂಚಾಯಿತಿ ಸಿಇಒ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಯಚೂರು ಜಿಲ್ಲೆಯ 6 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಕ್ಟೋಬರ್ 21ರೊಳಗೆ ಇಲಾಖೆಯ ವೈಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಯಚೂರು ಅಥವಾ ಗಿಲ್ಲೇಸುಗೂರು, ಸಿಂಧನೂರು, ಸಿರವಾರ, ತುರ್ವಿಹಾಳ ಹಾಗೂ ದೇವದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬೇಕು ಎಂದು ಇಲಾಖೆಯ ಉಪನಿರ್ದೇಶಕ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.