ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಕಾಂಗ್ರೆಸ್‌ ಮುಖಂಡರೊಂದಿಗೆ ಬೋಸರಾಜು, ಮುನಿಯಪ್ಪ ಚರ್ಚೆ

Published 30 ಏಪ್ರಿಲ್ 2024, 14:31 IST
Last Updated 30 ಏಪ್ರಿಲ್ 2024, 14:31 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರದ ಚುನಾವಣೆ ನಿಮಿತ್ತ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಮುನಿಯಪ್ಪ ಅವರು ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಅವರೊಂದಿಗೆ ಚರ್ಚೆ ನಡೆಸಿದರು.

ರಾಯಚೂರಿನ ರಂಜಿತಾ ಹೋಟೆಲ್‌ನಲ್ಲಿ ಪ್ರಮುಖ ಮುಖಂಡರೊಂದಿಗೆ ಸಭೆ ನಡೆಸಿದರು.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮಾಹಿತಿಯನ್ನು ಜನರಿಗೆ ತಲುಪಿಸುವೂದು ಸೇರಿ ಜಿ. ಕುಮಾರ ನಾಯಕ ಅವರ ಗೆಲುವಿನ ತಂತ್ರಗಾರಿಕೆಯ ಕುರಿತು ಮುಖಂಡರು ಚರ್ಚಿಸಿದರು.

ಎಐಸಿಸಿ ಸಹ ಉಸ್ತುವಾರಿ ಅಭಿಷೇಕ ದತ್ತು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ, ಮುಖಂಡರಾದ ಮೊಹಮ್ಮದ್ ಶಾಲಂ, ರಾಮಣ್ಣ ಹಾಗೂ ಯುವ ಮುಖಂಡ ರವಿ ಬೋಸರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT