ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಸಾದ ಮದ್ಲಾಪುರ ಕೊಲೆ ಪ್ರಕರಣ: ಎಸ್‌ಐಟಿ, ನ್ಯಾಯಾಂಗ ತನಿಖೆಗೆ ಆಗ್ರಹ

Published 11 ನವೆಂಬರ್ 2023, 14:44 IST
Last Updated 11 ನವೆಂಬರ್ 2023, 14:44 IST
ಅಕ್ಷರ ಗಾತ್ರ

ಕವಿತಾಳ: ‘ಮಾನ್ವಿ ತಾಲ್ಲೂಕಿನ ಮದ್ಲಾಪುರ ಗ್ರಾಮದಲ್ಲಿ ಮಾದಿಗ ಸಮುದಾಯದ ಕಾಂಗ್ರೆಸ್ ಮುಖಂಡ ಪ್ರಸಾದ ಅವರ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ವ್ಯವಸ್ಥೆ ವಿಫಲವಾಗಿದೆ’ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ, ವಕೀಲ ಶಿವಕುಮಾರ ಮ್ಯಾಗಳಮನಿ ಆರೋಪಿಸಿದರು.

ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜಕೀಯ ಒತ್ತಡಗಳಿಗೆ ಮಣಿದ ಪೊಲೀಸರು 9 ಆರೋಪಿಗಳ ಬಂಧನಕ್ಕೆ ಕ್ರಮವಹಿಸಿಲ್ಲ. ಪ್ರಕರಣದ ತನಿಖೆಯನ್ನು ನ್ಯಾಯಾಧೀಶರ ನೇತೃತ್ವದ ಸಮಿತಿ, ಎಸ್‍ಐಟಿ ಅಥವಾ ಸ್ವತಂತ್ರ ಸಂಸ್ಥೆಗೆ ವಹಿಸಬೇಕು’ ಎಂದು ಆಗ್ರಹಿಸಿದರು.

‘ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ನ.16ರಂದು ಮಾನ್ವಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರಗತಿಪರ ಸಂಘಟನೆಗಳ ಮುಖಂಡರು ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕು’ ಎಂದು ಸಂಘಟನೆ ಮುಖಂಡ ಚಂದ್ರು ಮನವಿ ಮಾಡಿದರು.

ಮುಖಂಡರಾದ ರಮೇಶ ಇರಬಗೇರ, ಅರಳಪ್ಪ ತುಪ್ಪದೂರು, ಈರಣ್ಣ ಕೆಳಗೇರಿ, ಹನುಮಂತ ಬುಳ್ಳಾಪುರ, ದುರುಗಪ್ಪ ಕಲಂಗೇರಿ, ಅಲ್ಲಮಪ್ರಭು, ಸಂತೋಷ ಕಲಶೆಟ್ಟಿ, ಯಾಕೂಬ, ಮಹಾದೇವ ಹಡಪದ, ಸಿದ್ದಪ್ಪ ಬುಳ್ಳಾಪುರ, ಒವಣ್ಣ, ಮೌನೇಶ ಕೊಡ್ಲಿ, ನಾಗಮೋಹನಸಿಂಗ್, ವೆಂಕಟೇಶ, ಪರಶುರಾಮ, ದೇವರಾಜ, ಮೌನೇಶ ಮತ್ತು ಮಹ್ಮದ್ ರಫಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT