ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಧಕರನ್ನು ಗುರುತಿಸುವುದು ಶ್ಲಾಘನೀಯ: ಶಾಸಕ ಡಾ.ಶಿವರಾಜ ಪಾಟೀಲ

ಮಹಾಂತಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
Last Updated 21 ನವೆಂಬರ್ 2021, 15:41 IST
ಅಕ್ಷರ ಗಾತ್ರ

ರಾಯಚೂರು: ಕಲಾವಿದರಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುವ ಕಾರ್ಯ ಶ್ಲಾಘನೀಯ. ಎಲೆಮರೆಕಾಯಿಯಂತೆ ದುಡಿಯುತ್ತಿರುವ ಸಾಧಕರಿಗೆ ಪ್ರೋತ್ಸಾಹಿಸಬೇಕಿದೆ. ಇದರಿಂದ ಮತ್ತಷ್ಟು ಸಾಧಕರು ಬೆಳೆಯಲು ಕಾರಣವಾಗುತ್ತದೆ ಎಂದು ಶಾಸಕ ಡಾ.ಶಿವರಾಜ ಪಾಟೀಲ ಹೇಳಿದರು.

ನಗರದ ಪಂಡಿತ್‌ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಾತೋಶ್ರೀ ಮಹಾಂತಮ್ಮ ಶಿವಬಸಪ್ಪ ಗೋನಾಳ ಪ್ರತಿಷ್ಠಾನದಿಂದ ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ 12ನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಮಹಾಂತಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶರಣಪ್ಪ ಗೋನಾಳ ಅವರು ಕಲಾವಿದರಾಗಿ ಸೇವೆ ಸಲ್ಲಿಸಿ ಸಾಧಕರನ್ನು ಗುರುತಿಸುವ ಕಾರ್ಯ ಮೆಚ್ಚುವಂತದ್ದು. ಕಳೆದ 12 ವರ್ಷದಿಂದ ಒಂದೇ ವೇದಿಕೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡುತ್ತಿದ್ದಾರೆ. ಸಾಧಕರಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು ಎಲ್ಲರೂ ಉತ್ಸಹದಿಂದ ಮತ್ತಷ್ಟು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಚೌಕಿ ಮಠದ ಡಾ.ಸಿದ್ದಲಿಂಗ ಮಹಾಸ್ವಾಮಿ ಮಾತನಾಡಿ, ಭಗವಂತ ಕೊಡಲು ಮುಂದಾದರೆ ಯಾರು ತಡೆಯಲು ಅಸಾಧ್ಯ. ಎಲ್ಲರಿಗೂ ಭಗವಂತನ ಕೃಪೆ ಇರಬೇಕು. ಸಾಧಕರಿಗೆ ಪ್ರಶಸ್ತಿ ನೀಡುವ ಕಾರ್ಯ ಮಾದರಿಯಾಗಿದೆ ಎಂದು ಹೇಳಿದರು.

ಮಹಾಂತಶ್ರೀ ಪ್ರಶಸ್ತಿಯನ್ನು ಗಣಪತಿ ಸಾಕ್ರೆ, ಸಮಾಜ ಸೇವಕ ಚಂದ್ರಶೇಖರ, ದೊಡ್ಡ ಈರಣ್ಣ ಕರ್ಲಿ, ವಿಜಯ ಮಹಾಂತ ಅವರಿಗೆ ಅಪ್ಪಗೇರಿ ತಿಮ್ಮರಾಜ್, ಮಹಾಂತ ಕಾಯಕಯೋಗಿ ಪ್ರಶಸ್ತಿಯನ್ನು ಡಾ.ಈಶ್ವರ ಮಂಟೂರು ಅವರಿಗೆ ಹಾಗೂ ಸಮಾಜಸೇವಾ ಪ್ರಶಸ್ತಿಯನ್ನು ಪತ್ರಕರ್ತ ಶಿವಪ್ಪ ಮಡಿವಾಳ ಸೇರಿದಂತೆ ವಿವಿಧ ಕ್ಷೇತ್ರದ ಸಾಧಕರಿಗೆ ನೀಡಿ ಗೌರವಿಸಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಮಾಜಿ ಅಧ್ಯಕ್ಷ ಕಡಗೋಲ್ ಆಂಜಿನಯ್ಯ, ಪೂರ್ಣಿಮಾ ಶಿಕ್ಷಣ ಸಂಸ್ಥೆ ಅದ್ಯಕ್ಷ ಎಸ್.ಎಲ್. ಕೇಶವರೆಡ್ಡಿ, ನಗರಸಭೆ ಮಾಜಿ ಸದಸ್ಯ ಹರೀಶ ನಾಡಗೌಡ, ನಗರಸಭೆ ಸದಸ್ಯ ಕೆ.ಎನ್.ನಾಗರಾಜ, ಬಾಬುರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT