ಹಟ್ಟಿ ಚಿನ್ನದ ಗಣಿ: ಅನ್ಫಿಟ್ ಯೋಜನೆ ಜಾರಿ ಮಾಡಬೇಕು ಎಂದು ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಕೆ.ಮಹಾಂತೇಶ ಅವರು ಗಣಿ ಕಂಪನಿ ಅಧ್ಯಕ್ಷ ಜಿ.ಟಿ ಪಾಟೀಲ ಅವರಿಗೆ ಆಗ್ರಹಿಸಿದರು.

ಬೆಂಗಳೂರಿನಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪನಿಯ ಕೇಂದ್ರ ಕಚೇರಿಗೆ ಭೇಟಿ ನೀಡಿ ಅಧ್ಯಕ್ಷ ಜಿ.ಟಿ.ಪಾಟೀಲ ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಆರ್.ಶಿಲ್ಪಾ ಅವರೊಂದಿಗೆ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚಿಸಿದರು.

ಕಾರ್ಮಿಕರ ಮೆಡಿಕಲ್ ಅನ್ಫಿಟ್, ಮುಂಬಡ್ತಿ, ಖಾಲಿ ಹುದ್ದೆಗಳ ಭರ್ತಿ, ಬಾಕಿ ಇರುವ ಮನೆ ಬಾಡಿಗೆ ಭತ್ಯೆ, ಕ್ಯಾಂಟೀನ್ಗೆ ಮೂಲ ಸೌಕರ್ಯ ಒದಗಿಸುವುದು, ಶುದ್ಧ ಕುಡಿಯುವ ನೀರು ಸೇರಿದಂತೆ ಅನೇಕ ಸೌಕರ್ಯಗಳನ್ನು ಕಾರ್ಮಿಕರಿಗೆ ಒದಗಿಸಬೇಕು ಎಂದು ಒತ್ತಾಯಿಸಿದರು.

‘ಮೂಲ ಸೌಕರ್ಯ ಒದಗಿಸುವ ಕುರಿತು ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಖಾಲಿ ಹುದ್ದೆ ಭರ್ತಿ ಮಾಡಲಾಗುವುದು ಎಂದು ಗಣಿ ಕಂಪನಿ ಅಧ್ಯಕ್ಷ ಜಿ.ಟಿ ಪಾಟೀಲ ಭರವಸೆ ನೀಡಿದ್ದಾರೆ’ ಎಂದು ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಮಹಾಂತೇಶ ತಿಳಿಸಿದರು.

ಜುಲೈ 9ರಂದು ಹಟ್ಟಿಗೆ ಭೇಟಿ ನೀಡಿ ಸಭೆ ನಡೆಸಿ ಕಾರ್ಮಿಕ ಸಂಘದ ಪದಾಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸಿಐಟಿಯು ಮುಖಂಡ ರಮೇಶ ವೀರಾಪುರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.