ರಾಯಚೂರು: ಜಿಲ್ಲೆಯಾದ್ಯಂತ ಮಹಾಶಿವರಾತ್ರಿ ನಿಮಿತ್ತ ಶಿವನ ಆರಾಧನೆಯು ವಿಶೇಷವಾಗಿ ನಡೆಯುತ್ತಿದೆ. ಶಿವ ದೇವಸ್ಥಾನಗಳಲ್ಲಿ ಬೆಳಗಿನ ಜಾವದಿಂದಲೇ ಧಾರ್ಮಿಕ ವಿಧಿವಿಧಾನಗಳು ಶುರುವಾಗಿವೆ.

ಶಿವಲಿಂಗ ದರ್ಶನಕ್ಕಾಗಿ ಭಕ್ತರು ದೇವಸ್ಥಾನಗಳಿಗೆ ತೆರಳುವುದು ಸಾಮಾನ್ಯ ನೋಟವಾಗಿದೆ. ಗುಂಪುಗುಂಪಾಗಿ ಬರುತ್ತಿರುವ ಭಕ್ತರು ಸರದಿ ಮೂಲಕ ದರ್ಶನ ಮಾಡಿಕೊಳ್ಳುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಾರಿ ಭಕ್ತರ ದಟ್ಟಣೆ ಏರ್ಪಡುವ ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ರಾಯಚೂರು ನಗರದ ಪುರಾತನ ರಾಮಲಿಂಗೇಶ್ವರ ದೇವಸ್ಥಾನ, ನಂದೇಶ್ವರ ದೇವಸ್ಥಾನ, ನಗರೇಶ್ವರ ದೇವಸ್ಥಾನ ಹಾಗೂ ಚಂದ್ರಮೌಳೇಶ್ವರ ದೇವಸ್ಥಾನಗಳ ಎದುರು ಭಕ್ತರ ಸರದಿ ಎದ್ದು ಕಾಣುತ್ತಿದೆ. ಭಕ್ತರ ಅನುಕೂಲಕ್ಕಾಗಿ ಪೆಂಡಾಲ್ ಹಾಕಲಾಗಿದೆ.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶಿವರಾತ್ರಿ ನಿಮಿತ್ತ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಶಿವಲಿಂಗಕ್ಕೆ ವಿಶೇಷ ಪೂಜಾ ಪುನಸ್ಕಾರಗಳನ್ನು ನೆರವೇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.