ರಾಯಚೂರು: ‘ಮನೆಯೊಳಗೆ, ಹೊರಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೈಗಳನ್ನು ಸೋಪಿನಿಂದ ತೊಳೆದು ಶುಚಿಯಾಗಿಟ್ಟುಕೊಳ್ಳಬೇಕು. ನಿಮ್ಮ ಆರೋಗ್ಯ ಚೆನ್ನಾಗಿದ್ದರೆ, ಸುತ್ತಮುತ್ತಲಿನ ಆರೋಗ್ಯವೂ ಉತ್ತಮವಾಗಿರುತ್ತದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಗರದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ಡೆಂಗಿ ರೋಗ ಹರಡುವ ವಿಧಾನ ಹಾಗೂ ಅದರಿಂದಾಗುವ ಅಪಾಯದ ಬಗ್ಗೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಕುರಿತು ವಿದ್ಯಾರ್ಥಿಗಳ ಬಗ್ಗೆ ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸಬೇಕು. ರಸ್ತೆ, ಸಾರ್ವಜನಿಕ ಪ್ರದೇಶ ಅಥವಾ ಜನರು ವಾಸಿಸುವ ಪ್ರದೇಶಗಳಲ್ಲಿ ತ್ಯಾಜ್ಯವನ್ನು ಎಸೆಯಬಾರದು. ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು’ ಎಂದು ತಿಳಿಸಿದರು.

‘ವರ್ಷದ ಜೂನ್ನಿಂದ ಅಕ್ಟೋಬರ್ ಅವಧಿಯಲ್ಲಿ ಈಡೀಸ್ ಸೊಳ್ಳೆಗಳು ಉಲ್ಬಣಗೊಳ್ಳುತ್ತವೆ. ಈ ಈಡೀಸ್ ಸೊಳ್ಳೆಗಳು ಹಗಲು ಹೊತ್ತು ಕಚ್ಚುತ್ತವೆ. ಈ ಸೊಳ್ಳೆಯಿಂದ ಡೆಂಗಿ, ಚಿಕೂನ್ ಗುನ್ಯಾ, ಝೀಕಾ, ಹಳದಿ ಜ್ವರ ಹರಡುತ್ತದೆ. ಅನಾಫಿಲಿಸ್ ಸೊಳ್ಳೆಗಳು ರಾತ್ರಿ ಸಮಯದಲ್ಲಿ ಕಚ್ಚುತ್ತವೆ. ಈ ಸೊಳ್ಳೆಯಿಂದ ಮಲೇರಿಯಾ ಹರಡುತ್ತದೆ. ಕ್ಯೂಲೆಕ್ಸ್ ಸೊಳ್ಳೆ ಮುಂಜಾನೆ ಹಾಗೂ ಮುಸ್ಸಂಜೆಯ ಸಮಯದಲ್ಲಿ ಕಚ್ಚುತ್ತವೆ. ಇವುಗಳಿಂದ ಜ್ವರ ಹರಡುತ್ತದೆ’ ಎಂದು ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖಯ್ಯ ಸ್ವಾಮಿ ಮಾತನಾಡಿ, ‘ಶಿಕ್ಷಣ ಸಂಸ್ಥೆಗಳಲ್ಲಿನ ಅಡುಗೆ ಕೋಣೆಗಳು, ಶುಚಿಗೊಳಿಸುವ ಉದ್ದೇಶಗಳಿಗಾಗಿ ವಿವಿಧ ಚಟುವಟಿಕೆಗಳಿಗಾಗಿ ಬಳಸುವ ಪಾತ್ರೆಗಳು, ಸಿಮೆಂಟ್ ಟ್ಯಾಂಕ್ಗಳು, ಓವರ್ ಹೆಡ್ ಟ್ಯಾಂಕ್ಗಳನ್ನು ಕಾಲಕಾಲಕ್ಕೆ ಶುಚಿಗೊಳಿಸಬೇಕು’ ಎಂದು ಸಲಹೆ ನೀಡಿದರು.

ಪ್ರಾತ್ಯಕ್ಷಿಕೆ: ಸೊಳ್ಳೆ ಉತ್ಪತ್ತಿ ಹೇಗಾಗುತ್ತದೆ? ಯಾವ ಸ್ಥಳಗಳಲ್ಲಿ ಸಂತಾನೋತ್ಪಕ್ತಿ ಹೆಚ್ಚಾಗಿರುತ್ತದೆ? ಹೊರಾಂಗಣ ಹಾಗೂ ಒಳಾಂಗಣದಲ್ಲಿ ಯಾವ ರೀತಿಯ ರಾಸಾಯನಿಕಗಳನ್ನು ಸಿಂಪಡಿಸಬೇಕು? ಮುನ್ನೆಚ್ಚರಿಕೆ ವಿಧಾನ ಹೇಗೆ ಅನುಸರಿಸಬೇಕು ಎನ್ನುವುದರ ಬಗ್ಗೆ ಇದೆ ವೇಳೆ ಪ್ರಾತ್ಯಕ್ಷಿಕೆಗಳ ಮೂಲಕ ತೋರಿಸಲಾಯಿತು.

ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿವಾಸ, ಹಿರಿಯ ಆರೋಗ್ಯ ನಿರೀಕ್ಷಕ ಮಾನಪ್ಪ, ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣ ಉಪ ಅಧಿಕಾರಿ ಬಸಯ್ಯ, ತಾಲ್ಲೂಕು ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಸರೋಜಾ, ಎಂಟಿಎಸ್ ಸಂಧ್ಯಾ ನಾಯಕ, ಸಹ ಶಿಕ್ಷಕಿ ಕಸ್ತೂರಿ, ದೈಹಿಕ ಶಿಕ್ಷಣ ಶಿಕ್ಷಕಿ ರಾಧಿಕಾ, ವಿಜ್ಞಾನ ಶಿಕ್ಷಕಿ ಅನಿತಾ, ಆರೋಗ್ಯ ಅಧಿಕಾರಿ ಅರುಣ, ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಅನ್ನಪೂರ್ಣ, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.