ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು | ಮಲೇರಿಯಾ ಜಾಗೃತಿ ಜಾಥಾ

Published 15 ಮೇ 2024, 15:22 IST
Last Updated 15 ಮೇ 2024, 15:22 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಗರದ ಹರಿಜನವಾಡದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಯಿತು.

ಜಾಥಾಕ್ಕೆ ಚಾಲನೆ ನೀಡಿದ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಪ್ರಜ್ವಲ ಮಾತನಾಡಿ,‘ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ಧದ ಹೋರಾಟ ತೀವ್ರಗೊಳಿಸೋಣ ಎಂಬ ಘೋಷಣೆಯೊಂದಿಗೆ ಜಾಥಾ ಆಯೋಜಿಸಲಾಗಿದೆ’ ಎಂದು ತಿಳಿಸಿದರು.

‘ಕೊಳಚೆ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಹರಡುತ್ತದೆ. ಆದ್ದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮಲೇರಿಯಾ ಹರಡದಂತೆ ಎಚ್ಚರ ವಹಿಸಬೇಕು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸರೋಪಾ, ಮಲೇರಿಯಾ ತಾಂತ್ರಿಕ ಮೇಲ್ವಿಚಾರಣೆ ಅಧಿಕಾರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಮಲೇರಿಯಾ ವಿಭಾಗದ ಮೇಲ್ವಿಚಾರಣೆ ಅಧಿಕಾರಿಗಳು, ಫಾರ್ಮಾಸಿ ಅಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT