ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಲಯ್ಯ ಅತ್ತನೂರನವರ ಮೂರು ಕೃತಿಗಳ ಬಿಡುಗಡೆ ನಾಳೆ

Published 10 ಮೇ 2024, 16:02 IST
Last Updated 10 ಮೇ 2024, 16:02 IST
ಅಕ್ಷರ ಗಾತ್ರ

ರಾಯಚೂರು:  ಕನ್ನಡ ಸಾಹಿತ್ಯ ಪರಿಷತ್ ರಾಯಚೂರು ಜಿಲ್ಲಾ ಹಾಗೂ ತಾಲ್ಲೂಕು ಘಟಕ, ಡೊಂಗರಗಾವ್  ಮಾತೋಶ್ರಿ ಈರಮ್ಮ ವಡ್ಡನಕೇರಿ ಪ್ರತಿಷ್ಠಾನ ವತಿಯಿಂದ ಮೇ 12ರಂದು ಬೆಳಿಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ಕಲಬುರ್ಗಿಯ ಕವಿ, ಪ್ರಾಧ್ಯಾಪಕ  ಮಲ್ಲಯ್ಯ ಅತ್ತನೂರ ಅವರ ಮೂರು ಕೃತಿಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

ಕಲಬುರ್ಗಿಯ ಸಿದ್ಧಲಿಂಗೇಶ್ವರ ಪ್ರಕಾಶನ ಸಂಸ್ಥಾಪಕ ಬಸವರಾಜ ಕೊನೇಕ್ ಕಾರ್ಯಕ್ರಮ ಉದ್ಘಾಟಿಸುವರು. ಚಿಂತಕ ಆರ್.ಜಿ.ಹಳ್ಳಿ ನಾಗರಾಜ ಪುಸ್ತಕ ಬಿಡುಗಡೆ ಮಾಡುವರು. ಕನ್ನಡ ಸಾಹಿತ್ಯ ಪರಿಷತ್ ನ ತಾಲ್ಲೂಕು ಘಟಕದ ಅಧ್ಯಕ್ಷ  ವೆಂಕಟೇಶ ಬೇವಿನಬೆಂಚಿ ಅಧ್ಯಕ್ಷತೆ ವಹಿಸಲಿದ್ದಾರೆ.

ಸಾಹಿತಿ ಶರಣಪ್ಪ ಚಲವಾದಿ, ಸುನಿಲ್ ಜಾಬಾದಿ, ಡಾ.ಗವಿಸಿದ್ಧಪ್ಪ ಎಚ್.ಪಾಟೀಲ ಭಾಗವಹಿಸಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಾರ್ಯದರ್ಶಿ ರಾವುತ್ ರಾವ್ ಬರೂರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT