ಭಾನುವಾರ, ಜನವರಿ 17, 2021
22 °C

ಹಟ್ಟಿ ಚಿನ್ನದ ಗಣಿ ಕಂಪೆನಿ ಅಧ್ಯಕ್ಷರಾಗಿ ಮಾನಪ್ಪ ಡಿ. ವಜ್ಜಲ್‌ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯ ಲಿಂಗಸುಗೂರಿನ ಮಾಜಿ ಶಾಸಕ ಮಾನಪ್ಪ ಡಿ.ವಜ್ಜಲ್‌ ಅವರನ್ನು ಹಟ್ಟಿ ಚಿನ್ನದ ಗಣಿ ಕಂಪೆನಿ ನಿಯಮಿತದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕು ವಜ್ಜಲ್‌ ಗ್ರಾಮದವರಾದ ಮಾನಪ್ಪ ಅವರು ಮೂಲತಃ ಗುತ್ತಿಗೆದಾರರಾಗಿದ್ದರು. 2004 ರಲ್ಲಿ ದೇವದುರ್ಗ ವಿಧಾನಸಭೆ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ರಾಜಕೀಯ ಆರಂಭಿಸಿದವರು. 

2008 ರಲ್ಲಿ ಲಿಂಗಸುಗೂರು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಮೊದಲಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2013 ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಶಾಸಕರಾಗಿ ಮರುಆಯ್ಕೆಯಾಗಿದ್ದರು. 2018 ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಸದ್ಯ ಬಿಜೆಪಿಯಲ್ಲಿ ಸಕ್ರಿಯವಾಗಿದ್ದಾರೆ.

ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್‌ ನಿರ್ದೇಶಕರ ನೇಮಕ

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್‌ನ ನಿರ್ದೇಶಕರನ್ನಾಗಿ ಎಸ್. ಲಿಂಗಮೂರ್ತಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಇವರು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಶಿವನಕಟ್ಟೆ ಗ್ರಾಮದವರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು