ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ನಲ್ಲಿ ಅಕಾಡೆಮಿ, ಮಕ್ಕಳು ಹಾಗೂ ಮಠದ ಹೆಸರನ್ನು ಸೇರಿಸುವ ಹಿನ್ನೆಲೆಯಲ್ಲಿ ಜಪಾನ್, ಜರ್ಮನಿ ಇಂಡೋನೇಷಿಯಾ ಹಾಗೂ ದೇಶದ ವಿವಿಧೆಡೆಯಿಂದ ಆಗಮಿಸಿದ್ದ ನೃತ್ಯ ಕಲಾವಿದರು ಒಂದೇ ವೇದಿಕೆಯಲ್ಲಿ 15 ನಿಮಿಷಗಳ ಕಾಲ ಶ್ರೀ ನಾಮ ರಾಮಾಯಣ೦ ಗೀತೆಗೆ ಸಾಮೂಹಿಕವಾಗಿ ಹೆಜ್ಜೆ ಹಾಕಿದರು.
ಶ್ರೀ ಸುಬುದೇ೦ದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು. ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಡಾ.ಸ್ವಾತಿ ಪಿ. ಭಾರದ್ವಾಜ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.