ಮಂತ್ರಾಲಯ (ರಾಯಚೂರು): ‘ಕರ್ನಾಟಕ ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ವಸತಿ ಗೃಹಗಳನ್ನು ಹೆಚ್ಚಿಸುವ ದಿಸೆಯಲ್ಲಿ ಕ್ರಮ ಕೈಗೊಳ್ಳಲಾಗುವುದು’ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯಕ್ಕೆ ಭೇಟಿ ನೀಡಿ ರಾಘವೇಂದ್ರ ಸ್ವಾಮಿ ದರ್ಶನದ ಪಡೆದ ನಂತರ ಮಂತ್ರಾಲಯದ ಕರ್ನಾಟಕ ಛತ್ರದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ನಿರ್ಮಾಣ ಮಾಡಿರುವ ನೂತನ ಹಾಗೂ ಹಳೆ ಕಟ್ಟಡಗಳ ಪರಿಶೀಲನೆ ನಡೆಸಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಮಂತ್ರಾಲಯಕ್ಕೆ ನಿತ್ಯ 200 ಬಸ್ಗಳು ಬಂದು ಹೋಗುತ್ತವೆ. ರೈಲು ಮೂಲಕವು ಜನರು ಮಂತ್ರಾಲಯಕ್ಕೆ ಬರುತ್ತಾರೆ. ಆಂಧ್ರಕ್ಕೆ ಹೋಲಿಸಿದರೆ ಶೇಕಡ 60ರಷ್ಟು ಜನರು ಕರ್ನಾಟಕದಿಂದಲೇ ಆಗಮಿಸುತ್ತಾರೆ. ಮಠಾಧೀಶರೊಂದಿಗೆ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಶ್ರೀಗಳು ಕರ್ನಾಟಕದಿಂದ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ವಸತಿ ಗೃಹಗಳ ನಿರ್ಮಾಣಕ್ಕೆ ಸೂಕ್ತವಾದ ಜಾಗದ ವ್ಯವಸ್ಥೆ ಮಾಡಿಕೊಡುವ ಮಾತುಕೊಟ್ಟಿದ್ದಾರೆ’ ಎಂದು ಸಚಿವರು ತಿಳಿಸಿದರು.

‘ಮಂತ್ರಾಲಯದಲ್ಲಿ ಈಗಿರುವ ಕರ್ನಾಟಕ ರಾಜ್ಯ ವಸತಿ ಗೃಹ ಕಟ್ಟಡದ ಕಳಪೆ ಕಾಮಗಾರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಕಳಪೆ ಕಾಮಗಾರಿ ನಡೆದಿದೆ ಎಂದು ಲೋಕಾಯುಕ್ತರಿಂದ ಸಾಬೀತಾದಲ್ಲಿ ಸಂಬಂಧಿಸಿದ ಗುತ್ತಿಗೆದಾರರಿಂದಲೇ ಕಟ್ಟಡದ ದುರಸ್ತಿ ಮಾಡಿಸಲಾಗುವುದು. ಇಲ್ಲವಾದಲ್ಲಿ ಕಟ್ಟಡದಲ್ಲಿನ ನೂನ್ಯತೆಗಳ ಬಗ್ಗೆ ಪರಿಶೀಲಿಸಿ ಮಾಸ್ಟರ್ ಪ್ಲಾನ್ ರೂಪಿಸಿ ಕಟ್ಟಡವನ್ನು ಸರಿಪಡಿಸಲಾಗುವುದು’ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆಗೆ ಉಸ್ತುವಾರಿ: ಕಲ್ಯಾಣ ಮಂಟಪ, ಛತ್ರ, ವಸತಿ ಗೃಹಗಳ ನಿರ್ಮಾಣ ಪ್ರಕರಣವು ನ್ಯಾಯಾಲಯದಲ್ಲಿರುವ ಕಾರಣ ಕಟ್ಟಡದ ದುರಸ್ತಿಗೆ ತೊಡಕಾಗಿದೆ. ಉತ್ತಮ ದರ್ಜೆಯ ನಿರ್ವಹಣೆಗಾಗಿ ಮಂತ್ರಾಲಯದಲ್ಲಿರುವ ಕರ್ನಾಟಕ ವಸತಿ ಗೃಹಗಳ ಕಟ್ಟಡದ ನಿರ್ಹಹಣೆಯ ಉಸ್ತುವಾರಿಯನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸುವ ಬಗ್ಗೆ ಪ್ರವಾಸೋದ್ಯಮ ಸಚಿವರಾದ ಎಚ್ ಕೆ ಪಾಟೀಲ ಅವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತ ವೆಂಕಟೇಶ್ ಎಂ.ವಿ, ಜಿಲ್ಲಾಧಿಕಾರಿ ನಿತೀಶ್ ಕೆ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಕಿಶೋರಕುಮಾರ ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಶ್ರೀಕೃಷ್ಣ ಶಾವಂತಗೇರಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎಸ್.ಚಂದ್ರಶೇಖರ, ಕರ್ನಾಟಕ ವಸತಿ ಗೃಹ ಕಟ್ಟಡದ ಅಧಿಕಾರಿ ಆಂಜನೇಯ ಹಾಜರಿದ್ದರು.

ಆನ್ಲೈನ್ ವ್ಯವಸ್ಥೆಗೆ ಕ್ರಮ

ಧಾರ್ಮಿಕ ದತ್ತಿ ಇಲಾಖೆಯಿಂದ ಮಂತ್ರಾಲಯದಲ್ಲಿ ನಿರ್ಮಾಣ ಮಾಡಿರುವ ಕರ್ನಾಟಕ ರಾಜ್ಯದ ವಸತಿ ಗೃಹದಲ್ಲಿ ಒಟ್ಟು 50 ಕೋಣೆಗಳಿವೆ. ಇವುಗಳನ್ನು ಕರ್ನಾಟಕದಿಂದ ಬರುವ ಭಕ್ತರಿಗೆ ಮೀಸಲಿರಿಸಿದೆ. ತಲಾ ನಾಲ್ಕು ಜನರು 12 ಗಂಟೆ ಸಮಯ ವಾಸ್ತವ್ಯ ಮಾಡಲು ₹500 ನಿಗದಿಪಡಿಸಲಾಗಿದೆ. 12 ಗಂಟೆ ಮೀರಿದಾಗ 1000 ದರ ನಿಗದಿಪಡಿಸಲಾಗುತ್ತದೆ. ಒಟ್ಟು 50 ಕೊಠಡಿಗಳನ್ನು ಆನಲೈನ್ ಮೂಲಕ ಹಾಗೂ ಇನ್ನುಳಿದ 20 ರೂಮುಗಳನ್ನು ನೇರವಾಗಿ ಹಣ ಪಾವತಿಸಿ ಬುಕ್ಕಿಂಗ್ ಮಾಡುವ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಅವಧಿ ಮೀರಿದ ಬಸ್ಗಳನ್ನು ಹಿಂದಕ್ಕೆ ಪಡೆದು ಆರು ತಿಂಗಳಲ್ಲಿ ಕಲ್ಯಾಣಕ ಕರ್ನಾಟಕಕ್ಕೆ ಹೊಸ ಬಸ್ಗಳನ್ನು ಕೊಡಲಾಗುವುದು.
-ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.