ಶನಿವಾರ, ಸೆಪ್ಟೆಂಬರ್ 24, 2022
24 °C

351ನೇ ಆರಾಧನಾ ಮಹೋತ್ಸವ | ರಾಯರ ಮಧ್ಯಾರಾಧನೆ: ಸುವರ್ಣ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಯವರ 351ನೇ ಆರಾಧನಾ ಮಹೋತ್ಸವ ಸಂಭ್ರಮದಿಂದ ನೆರವೇರುತ್ತಿದ್ದು, ನಾಲ್ಕನೇ ದಿನವಾದ ಶನಿವಾರ ನಡೆದ ಮಧ್ಯಾರಾಧನೆಯಲ್ಲಿ ದೇಶದ ವಿವಿಧೆಡೆಯಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಬೆಳಿಗ್ಗೆಯಿಂದ‌ ವಿಶೇಷ ಪೂಜಾ‌ ವಿಧಿವಿಧಾನಗಳು ಆರಂಭವಾಗಿವೆ. ರಾಯರ ಮೂಲವೃಂದಾವನಕ್ಕೆ ಮಹಾಪಂಚಾಮೃತ ಅಭಿಷೇಕ ನೆರವೇರಿಸಿದ ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು, ನವರತ್ನ ಕವಚವನ್ನು ಸಮರ್ಪಿಸಿದರು. ವೃಂದಾವನಕ್ಕೆ ವಿಶೇಷ ಪುಷ್ಪಾಲಂಕಾರ, ವಸ್ತ್ರಾಲಂಕಾರ ಮಾಡಿದರು. ತಿರುಪತಿ ತಿರುಮಲದಿಂದ ತರಲಾಗಿದ್ದ ಶ್ರೀನಿವಾಸ ದೇವರ ಶೇಷವಸ್ತ್ರವನ್ನು ರಾಯರ ಸನ್ನಿಧಿಗೆ ಇಡಲಾಯಿತು. ಆನಂತರ ಮಹಾಮಂಗಳಾರತಿ ನೆರವೇರಿಸಲಾಯಿತು.

ಮಧ್ಯಾರಾಧನೆ ನಿಮಿತ್ತ ಮಠದ ಪ್ರಾಕಾರದಲ್ಲಿ ಸುವರ್ಣ ರಥೋತ್ಸವ ವಿಶೇಷವಾಗಿತ್ತು. ಚಂಡಿವಾದ್ಯ ವೈಭವ ಹಾಗೂ ವೇದಮಂತ್ರ ಘೋಷಣೆಗಳೊಂದಿಗೆ ರಥೋತ್ಸವ ನಡೆಯಿತು. 

ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ರಾಯರಿಗೆ ಜಯ ಘೋಷಣೆಗಳನ್ನು ಕೂಗಿದರು.

ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತು ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ರಾಯರ ಮಧ್ಯಾರಾಧನೆಯಲ್ಲಿ ಪಾಲ್ಗೊಂಡು, ದರ್ಶನ ಪಡೆದು ತೆರಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು