ಮಾನ್ವಿ: ‘ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಅಕ್ಟೋಬರ್ 3ರಂದು ಮಾನ್ವಿ ಬಂದ್‌ಗೆ ಕರೆ ನೀಡಿ ಪ್ರತಿಭಟಿಸಲಾಗುವುದು’ ಎಂದು ಒಳಮೀಸಲಾತಿ ಜಾರಿಗಾಗಿ ಐಕ್ಯ ಹೋರಾಟ ಸಮಿತಿಯ ಸಂಚಾಲಕ ಪಿ.ಜಯಪ್ರಕಾಶ ತಿಳಿಸಿದರು.
ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಸುಪ್ರೀಂ ಕೋರ್ಟ್ ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಉಪ ವರ್ಗೀಕರಣಕ್ಕೆ ಅವಕಾಶ ನೀಡಿದೆ. ಒಳ ಮೀಸಲಾತಿ ನೀಡುವ ವಿವೇಚನೆಯನ್ನು ರಾಜ್ಯ ಸರ್ಕಾರಕ್ಕೆ ಬಿಟ್ಟಿದೆ. ಆದರೂ ಸರ್ಕಾರ ಸದಾಶಿವ ಆಯೋಗದ ವರದಿ ಜಾರಿ ಮಾಡುತ್ತಿಲ್ಲ. ಆದ್ದರಿಂದ ಅಕ್ಟೋಬರ್ 3ರಂದು ಶಾಂತಿಯುತವಾಗಿ ಮಾನ್ವಿ ಬಂದ್ ಮೂಲಕ ಪ್ರತಿಭಟನೆ ನಡೆಸಲಾಗುವುದು. ಈ ಬಂದ್ ಕರೆಗೆ ಸ್ಥಳೀಯ ಎಲ್ಲಾ ಶಾಲಾ–ಕಾಲೇಜುಗಳು, ವ್ಯಾಪಾರಿಗಳು, ಸಂಘ–ಸಂಸ್ಥೆಗಳು ಬೆಂಬಲ ನೀಡಬೇಕು’ ಎಂದು ಮನವಿ ಮಾಡಿದರು.