ಮಾನ್ವಿ: ‘ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸಲು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶ್ರಮಿಸಬೇಕು’ ಎಂದು ಬಿಜೆಪಿ ಜಿಲ್ಲಾ ಪ್ರಭಾರಿ ಅಮರನಾಥ ಪಾಟೀಲ್ ಹೇಳಿದರು.

ಸೋಮವಾರ ಪಟ್ಟಣದ ಎಪಿಎಂಸಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಮಾನ್ವಿ ಮಂಡಲದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮುಂಬರುವ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು’ ಎಂದು ಅವರು ಸಲಹೆ ನೀಡಿದರು.

ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಕೆ.ಎಂ.ಪಾಟೀಲ್ ಹಾಗೂ ನರಸಿಂಹರಾವ್ ಕುಲಕರ್ಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶರಣಪ್ಪಗೌಡ ನಕ್ಕುಂದಿ, ಪ್ರಾಣೇಶ ದೇಶಪಾಂಡೆ ಹಾಗೂ ಶಂಕರರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಕೆ.ಎಸ್.ಕುಮಾರಸ್ವಾಮಿ ಪೋತ್ನಾಳ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವೀರೆಶನಾಯಕ ಬೆಟ್ಟದೂರು, ಜಿಲ್ಲಾ ಎಸ್.ಟಿ ಮೋರ್ಚಾ ಅಧ್ಯಕ್ಷ ಮ್ಯಾಕಲ್ ಅಯ್ಯಪ್ಪನಾಯಕ, ಮುಖಂಡರಾದ ಎಸ್.ತಿಮ್ಮಾರೆಡ್ಡಿ ಭೋಗಾವತಿ, ಮಲ್ಲಿಕಾರ್ಜುನಗೌಡ ಸಂಗಾಪುರ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.